Leviticus · chapter 5 · verse 2
Leviticus 5:2 in Kannada
ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
Illave yaavanaadaroo ashuddhavaada yaavadannaadaroo muttidare, andare adu ashuddha vaada mrugada henavaagali danada henavaagali haridaaduvavugala henagalaagali avanige tiliyadi ddaroo avanu ashuddhanaagiddu aparaadhiyaagiruvanu.
Leviticus 5:2 in English
- King James Version (KJV)
- Or if a soul touch any unclean thing, whether [it be] a carcase of an unclean beast, or a carcase of unclean cattle, or the carcase of unclean creeping things, and [if] it be hidden from him; he also shall be unclean, and guilty.
- World English Bible (WEB)
- “‘Or if anyone touches any unclean thing, whether it is the carcass of an unclean animal, or the carcass of unclean livestock, or the carcass of unclean creeping things, and it is hidden from him, and he is unclean, then he shall be guilty.
- American Standard Version (ASV)
- Or if any one touch any unclean thing, whether it be the carcass of an unclean beast, or the carcass of unclean cattle, or the carcass of unclean creeping things, and it be hidden from him, and he be unclean, then he shall be guilty.
- Bible in Basic English (BBE)
- If anyone becomes unclean through touching unconsciously some unclean thing, such as the dead body of an unclean beast or of unclean cattle or of any unclean animal which goes flat on the earth, he will be responsible:
- Darby Translation (DBY)
- Or if any one touch any unclean thing, whether it be the carcase of an unclean beast, or the carcase of unclean cattle, or the carcase of an unclean crawling thing, and it be hid from him, — he also is unclean and guilty;
- Webster's Bible (WBS)
- Or if a soul shall touch any unclean thing, whether a carcass of an unclean beast, or a carcass of unclean cattle, or the carcass of unclean creeping animals, and it shall be hidden from him; he also shall be unclean, and guilty.
- Young's Literal Translation (YLT)
- 'Or when a person cometh against any thing unclean, or against a carcase of an unclean beast, or against a carcase of unclean cattle, or against a carcase of an unclean teeming creature, and it hath been hidden from him, and he unclean, and guilty;
Read in context
- 1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
- 2ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
- 3ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.
- 4ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
Cross references
- Leviticus 5:17 ಯಾಜಕಕಾಂಡ 5:17ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
- Deuteronomy 14:8 ಧರ್ಮೋಪದೇಶಕಾಂಡ 14:8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Haggai 2:13 ಹಗ್ಗಾಯ 2:13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- Leviticus 11:24–40 ಯಾಜಕಕಾಂಡ 11:24–40ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು. ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು. ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು. ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು. ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು. ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು. ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು. ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು. ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು. ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
- Numbers 19:11–16 ಅರಣ್ಯಕಾಂಡ 19:11–16ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Leviticus 11:11 ಯಾಜಕಕಾಂಡ 11:11ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
- Leviticus 4:13 ಯಾಜಕಕಾಂಡ 4:13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- Leviticus 5:4 ಯಾಜಕಕಾಂಡ 5:4ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Luke 11:44 ಲೂಕನು 11:44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
- Leviticus 7:21 ಯಾಜಕಕಾಂಡ 7:21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
Original words (Hebrew)
- soul · H5315נֶפֶשׁ nephesh
- touch · H5060נָגַע nâgaʻ
- unclean · H2931טָמֵא ṭâmêʼ
- thing · H1697דָּבָר dâbâr
- carcase · H5038נְבֵלָה nᵉbêlâh
- unclean · H2931טָמֵא ṭâmêʼ
- beast · H2416חַי chay
- carcase · H5038נְבֵלָה nᵉbêlâh
- unclean · H2931טָמֵא ṭâmêʼ
- cattle · H929בְּהֵמָה bᵉhêmâh
- carcase · H5038נְבֵלָה nᵉbêlâh
- unclean · H2931טָמֵא ṭâmêʼ
- things · H8318שֶׁרֶץ sherets
- hidden · H5956עָלַם ʻâlam
- unclean · H2931טָמֵא ṭâmêʼ
- guilty · H816אָשַׁם ʼâsham