Leviticus · chapter 6 · verse 18
Leviticus 6:18 in Kannada
ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
Aaronana makkalalli ellaa gandu makkalu adannu tinnabeku, kartanige benkiyinda maadida samarpanegala vishayadalli nimma santatigalige idu ondu shaashvata kattaleyaagiruvadu; avugalannu muttuva prati yobbanu parishuddhanaagirabeku andanu.
Leviticus 6:18 in English
- King James Version (KJV)
- All the males among the children of Aaron shall eat of it. [It shall be] a statute for ever in your generations concerning the offerings of the LORD made by fire: every one that toucheth them shall be holy.
- World English Bible (WEB)
- Every male among the children of Aaron shall eat of it, as their portion forever throughout your generations, from the offerings of the LORD made by fire. Whoever touches them shall be holy.’”
- American Standard Version (ASV)
- Every male among the children of Aaron shall eat of it, as [his] portion for ever throughout your generations, from the offerings of Jehovah made by fire: whosoever toucheth them shall be holy.
- Bible in Basic English (BBE)
- Every male among the children of Aaron may have it for food; it is their right for ever through all your generations, from the offerings made by fire to the Lord: anyone touching them will be holy.
- Darby Translation (DBY)
- All the males among the children of Aaron shall eat of it. [It is] an everlasting statute in your generations, [their portion] of Jehovah's offerings by fire: whatever toucheth these shall be holy.
- Webster's Bible (WBS)
- All the males among the children of Aaron shall eat of it. [It shall be] a statute for ever in your generations concerning the offerings of the LORD made by fire: every one that toucheth them shall be holy.
- Young's Literal Translation (YLT)
- Every male among the sons of Aaron doth eat it — a statute age-during to your generations, out of the fire-offerings of Jehovah: all that cometh against them is holy.'
Read in context
- 16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- 17ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- 18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- 19ಕರ್ತನು ಮೋಶೆಯೊಡನೆ ಮಾತನಾಡಿ--
- 20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
Cross references
- Numbers 18:10 ಅರಣ್ಯಕಾಂಡ 18:10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Leviticus 6:29 ಯಾಜಕಕಾಂಡ 6:29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 6:27 ಯಾಜಕಕಾಂಡ 6:27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
- 1 Peter 1:16 1 ಪೇತ್ರನು 1:16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Leviticus 22:3–7 ಯಾಜಕಕಾಂಡ 22:3–7ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು. ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು. ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
- Haggai 2:12–14 ಹಗ್ಗಾಯ 2:12–14ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು. ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು. ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- Leviticus 21:21–22 ಯಾಜಕಕಾಂಡ 21:21–22ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Zechariah 14:20–21 ಜೆಕರ್ಯ 14:20–21ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.