Leviticus · chapter 6 · verse 26
Leviticus 6:26 in Kannada
ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
Paapakkaagi samarpane maaduva yaajakanu adannu tinnabeku; adannu sabheya gudaara angalada parishuddha sthaladalli tinnabeku.
Leviticus 6:26 in English
- King James Version (KJV)
- The priest that offereth it for sin shall eat it: in the holy place shall it be eaten, in the court of the tabernacle of the congregation.
- World English Bible (WEB)
- The priest who offers it for sin shall eat it. It shall be eaten in a holy place, in the court of the Tent of Meeting.
- American Standard Version (ASV)
- The priest that offereth it for sin shall eat it: in a holy place shall it be eaten, in the court of the tent of meeting.
- Bible in Basic English (BBE)
- The priest by whom it is offered for sin, is to take it for his food in a holy place, in the open space of the Tent of meeting.
- Darby Translation (DBY)
- The priest that offereth it for sin shall eat it: in a holy place shall it be eaten, in the court of the tent of meeting.
- Webster's Bible (WBS)
- The priest that offereth it for sin shall eat it: in the holy place shall it be eaten, in the court of the tabernacle of the congregation.
- Young's Literal Translation (YLT)
- 'The priest who is making atonement with it doth eat it, in the holy place it is eaten, in the court of the tent of meeting;
Read in context
- 24ಕರ್ತನು ಮೋಶೆಯೊಂದಿಗೆ ಮಾತನಾಡಿ--
- 25ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
- 26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- 27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
- 28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
Cross references
- Leviticus 10:17–18 ಯಾಜಕಕಾಂಡ 10:17–18ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ? ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
- Ezekiel 44:28–29 ಯೆಹೆಜ್ಕೇಲನು 44:28–29ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು. ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- Ezekiel 46:20 ಯೆಹೆಜ್ಕೇಲನು 46:20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
- Hosea 4:8 ಹೋಶೇಯ 4:8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- Leviticus 6:16 ಯಾಜಕಕಾಂಡ 6:16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- Exodus 38:9–19 ವಿಮೋಚನಕಾಂಡ 38:9–19ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು. ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು. ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು. ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು. ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ. ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು. ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು. ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.
- Exodus 27:9–18 ವಿಮೋಚನಕಾಂಡ 27:9–18ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು. ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು. ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು. ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು. ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು. ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು. ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು. ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು. ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು. ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
- Numbers 18:9–10 ಅರಣ್ಯಕಾಂಡ 18:9–10ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Exodus 40:33 ವಿಮೋಚನಕಾಂಡ 40:33ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.