Leviticus · chapter 6 · verse 30
Leviticus 6:30 in Kannada
ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Yaava paapada baliya raktavu sabheya dereyolage samaadhaanakkaagi taralpattito aa paapada baliyannu parishuddha sthaladalli tinnabaaradu; adannu benkiyinda sudabeku.
Leviticus 6:30 in English
- King James Version (KJV)
- And no sin offering, whereof [any] of the blood is brought into the tabernacle of the congregation to reconcile [withal] in the holy [place], shall be eaten: it shall be burnt in the fire.
- World English Bible (WEB)
- No sin offering, of which any of the blood is brought into the Tent of Meeting to make atonement in the Holy Place, shall be eaten. It shall be burned with fire.
- American Standard Version (ASV)
- And no sin-offering, whereof any of the blood is brought into the tent of meeting to make atonement in the holy place, shall be eaten: it shall be burnt with fire.
- Bible in Basic English (BBE)
- No sin-offering, the blood of which is taken into the Tent of meeting, to take away sin in the holy place, may be used for food: it is to be burned with fire.
- Darby Translation (DBY)
- And no sin-offering whereof blood hath been brought to the tent of meeting, to make atonement in the sanctuary, shall be eaten: it shall be burned with fire.
- Webster's Bible (WBS)
- And no sin-offering, of which [any] of the blood is brought into the tabernacle of the congregation to make reconciliation in the holy [place] , shall be eaten: it shall be burnt in the fire.
- Young's Literal Translation (YLT)
- and no sin-offering, [any] of whose blood is brought in unto the tent of meeting to make atonement in the sanctuary is eaten; with fire it is burnt.
Read in context
- 28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- 29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- 30ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Cross references
- Hebrews 13:11 ಇಬ್ರಿಯರಿಗೆ 13:11ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
- Leviticus 16:27–28 ಯಾಜಕಕಾಂಡ 16:27–28ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು. ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- Leviticus 10:18 ಯಾಜಕಕಾಂಡ 10:18ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.
- Leviticus 4:3–21 ಯಾಜಕಕಾಂಡ 4:3–21ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು. ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು. ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು. ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು. ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Hebrews 9:11–12 ಇಬ್ರಿಯರಿಗೆ 9:11–12ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.