Leviticus · chapter 7 · verse 21
Leviticus 7:21 in Kannada
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
Idallade yaavanaadaroo manushyana ashuddhatvavannaagali yaavude ashuddha vaadaddannaagali illave yaavude holeyaada ashuddha vastuvannaagali yaavude ashuddha praani yannaagali muttidaroo mattu kartanige sambandhi sida samaadhaana baliya yajnyada maansavannu tindaroo avanu tanna janarinda tegeduhaakalpada beku andanu.
Leviticus 7:21 in English
- King James Version (KJV)
- Moreover the soul that shall touch any unclean [thing, as] the uncleanness of man, or [any] unclean beast, or any abominable unclean [thing], and eat of the flesh of the sacrifice of peace offerings, which [pertain] unto the LORD, even that soul shall be cut off from his people.
- World English Bible (WEB)
- When anyone touches any unclean thing, the uncleanness of man, or an unclean animal, or any unclean abomination, and eats some of the meat of the sacrifice of peace offerings which belong to the LORD, that soul shall be cut off from his people.’”
- American Standard Version (ASV)
- And when any one shall touch any unclean thing, the uncleanness of man, or an unclean beast, or any unclean abomination, and eat of the flesh of the sacrifice of peace-offerings, which pertain unto Jehovah, that soul shall be cut off from his people.
- Bible in Basic English (BBE)
- And anyone who, after touching any unclean thing of man or an unclean beast or any unclean and disgusting thing, takes as food the flesh of the peace-offerings, which are the Lord's, will be cut off from his people.
- Darby Translation (DBY)
- And if any one touch anything unclean, the uncleanness of man, or unclean beast, or any unclean abomination, and eat of the flesh of the sacrifice of peace-offering, which is for Jehovah, that soul shall be cut off from his peoples.
- Webster's Bible (WBS)
- Moreover, the soul that shall touch any unclean [thing] , [as] the uncleanness of man, or [any] unclean beast, or any abominable unclean [thing] , and eat of the flesh of the sacrifice of peace-offerings which [pertain] to the LORD, even that soul shall be cut off from his people.
- Young's Literal Translation (YLT)
- 'And when a person cometh against any thing unclean, of the uncleanness of man, or of the uncleanness of beasts, or of any unclean teeming creature, and hath eaten of the flesh of the sacrifice of the peace-offerings which [are] Jehovah's, even that person hath been cut off from his people.'
Read in context
- 19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
- 20ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- 21ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
- 22ಕರ್ತನು ಮೋಶೆಯೊಂದಿಗೆ ಮಾತನಾಡಿ--
- 23ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
Cross references
- Leviticus 11:20 ಯಾಜಕಕಾಂಡ 11:20ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
- Leviticus 12:1–59 ಯಾಜಕಕಾಂಡ 12:1–59ಕರ್ತನು ಮೋಶೆಯೊಂದಿಗೆ ಮಾತನಾಡಿ -- ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು. ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು. ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು. ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು. ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.
- Ezekiel 4:14 ಯೆಹೆಜ್ಕೇಲನು 4:14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- Leviticus 15:1–33 ಯಾಜಕಕಾಂಡ 15:1–33ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು. ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು. ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು. ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು. ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು. ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು. ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು. ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು. ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು. ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು. ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು. ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು. ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ. ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Leviticus 5:2–3 ಯಾಜಕಕಾಂಡ 5:2–3ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.
- Leviticus 11:10–13 ಯಾಜಕಕಾಂಡ 11:10–13ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು. ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
- Exodus 12:19 ವಿಮೋಚನಕಾಂಡ 12:19ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
- Leviticus 18:29 ಯಾಜಕಕಾಂಡ 18:29ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Deuteronomy 14:7–8 ಧರ್ಮೋಪದೇಶಕಾಂಡ 14:7–8ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Leviticus 7:27 ಯಾಜಕಕಾಂಡ 7:27ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
- Deuteronomy 14:3 ಧರ್ಮೋಪದೇಶಕಾಂಡ 14:3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
- Leviticus 22:4 ಯಾಜಕಕಾಂಡ 22:4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
Original words (Hebrew)
- soul · H5315נֶפֶשׁ nephesh
- touch · H5060נָגַע nâgaʻ
- unclean · H2932טֻמְאָה ṭumʼâh
- uncleanness · H2932טֻמְאָה ṭumʼâh
- man · H120אָדָם ʼâdâm
- unclean · H2931טָמֵא ṭâmêʼ
- beast · H929בְּהֵמָה bᵉhêmâh
- abominable · H8263שֶׁקֶץ sheqets
- unclean · H2931טָמֵא ṭâmêʼ
- eat · H398אָכַל ʼâkal
- flesh · H1320בָּשָׂר bâsâr
- sacrifice · H2077זֶבַח zebach
- offerings · H8002שֶׁלֶם shelem
- soul · H5315נֶפֶשׁ nephesh
- off · H3772כָּרַת kârath
- people · H5971עַם ʻam