Leviticus · chapter 7 · verse 33
Leviticus 7:33 in Kannada
ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
Samaa dhaanada samarpanegala raktavannoo kobbannoo sama rpisuva aaronana kumaararalli obbanu bhujada balabhaagavannu tanna paalaagi tegedukollali.
Leviticus 7:33 in English
- King James Version (KJV)
- He among the sons of Aaron, that offereth the blood of the peace offerings, and the fat, shall have the right shoulder for [his] part.
- World English Bible (WEB)
- He among the sons of Aaron who offers the blood of the peace offerings, and the fat, shall have the right thigh for a portion.
- American Standard Version (ASV)
- He among the sons of Aaron that offereth the blood of the peace-offerings, and the fat, shall have the right thigh for a portion.
- Bible in Basic English (BBE)
- That man, among the sons of Aaron, by whom the blood of the peace-offering and the fat are offered, is to have the right leg for his part.
- Darby Translation (DBY)
- He of the sons of Aaron that presenteth the blood of the peace-offerings, and the fat, shall have the right shoulder for [his] part.
- Webster's Bible (WBS)
- He among the sons' of Aaron that offereth the blood of the peace-offerings, and the fat, shall have the right shoulder for [his] part.
- Young's Literal Translation (YLT)
- he of the sons of Aaron who is bringing near the blood of the peace-offerings, and the fat, his is the right leg for a portion.
Read in context
- 31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
- 32ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
- 33ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
- 34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
- 35ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
Cross references
- Leviticus 6:1–30 ಯಾಜಕಕಾಂಡ 6:1–30ಕರ್ತನು ಮೋಶೆಯೊಡನೆ ಮಾತನಾಡಿ ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು. ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು. ಕರ್ತನು ಮೋಶೆಯೊಂದಿಗೆ ಮಾತನಾಡಿ-- ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು. ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು. ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು. ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು. ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು. ಕರ್ತನು ಮೋಶೆಯೊಡನೆ ಮಾತನಾಡಿ-- ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು. ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು. ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು. ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು. ಕರ್ತನು ಮೋಶೆಯೊಂದಿಗೆ ಮಾತನಾಡಿ-- ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು. ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು. ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 26:1–46 ಯಾಜಕಕಾಂಡ 26:1–46ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ. ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು. ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ. ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು. ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ. ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು. ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ. ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ. ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Leviticus 7:3 ಯಾಜಕಕಾಂಡ 7:3ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ