Leviticus · chapter 7 · verse 9
Leviticus 7:9 in Kannada
ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
Oleyalli beyisiddoo baandleyalliyoo boguniyalliyoo tayaa risida ellaa aahaarada arpaneyoo samarpisida yaajakanadaagirabeku.
Leviticus 7:9 in English
- King James Version (KJV)
- And all the meat offering that is baken in the oven, and all that is dressed in the fryingpan, and in the pan, shall be the priest’s that offereth it.
- World English Bible (WEB)
- Every meal offering that is baked in the oven, and all that is prepared in the pan and on the griddle, shall be the priest’s who offers it.
- American Standard Version (ASV)
- And every meal-offering that is baken in the oven, and all that is dressed in the frying-pan, and on the baking-pan, shall be the priest’s that offereth it.
- Bible in Basic English (BBE)
- And every meal offering which is cooked in the oven and everything made in a cooking pot or on a flat plate, is for the priest by whom it is offered.
- Darby Translation (DBY)
- And every oblation that is baken in the oven, and all that is prepared in the cauldron and in the pan, shall be the priest's who offereth it; to him it shall belong.
- Webster's Bible (WBS)
- And all the meat-offering that is baked in the oven, and all that is dressed in the frying-pan, and in the pan, shall be the priest's that offereth it.
- Young's Literal Translation (YLT)
- and every present which is baked in an oven, and every one done in a frying-pan, and on a girdel, [is] the priest's who is bringing it near; it is his;
Read in context
- 7ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- 8ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
- 9ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
- 10ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
- 11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
Cross references
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- Numbers 18:9 ಅರಣ್ಯಕಾಂಡ 18:9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Leviticus 2:3–7 ಯಾಜಕಕಾಂಡ 2:3–7ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
- Ezekiel 44:29 ಯೆಹೆಜ್ಕೇಲನು 44:29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
- 1 Corinthians 9:13 1 ಕೊರಿಂಥದವರಿಗೆ 9:13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- 1 Corinthians 9:7 1 ಕೊರಿಂಥದವರಿಗೆ 9:7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- Leviticus 5:13 ಯಾಜಕಕಾಂಡ 5:13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
- Leviticus 6:16–18 ಯಾಜಕಕಾಂಡ 6:16–18ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.