Leviticus · chapter 8 · verse 15
Leviticus 8:15 in Kannada
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
Aaga avanu adannu vadhisi danu; mosheyu adara raktavannu tegedukondu yajnyavediya meliruva kombugalige suttaloo tanna beralininda hachchi yajnyavediyannu shuddheekarisi ulida raktavannu yajnyavediya adiyalli hoydanu. Adara mele sandhaanamaaduvadakkaagi adannu pavitramaadidanu.
Leviticus 8:15 in English
- King James Version (KJV)
- And he slew [it;] and Moses took the blood, and put [it] upon the horns of the altar round about with his finger, and purified the altar, and poured the blood at the bottom of the altar, and sanctified it, to make reconciliation upon it.
- World English Bible (WEB)
- He killed it; and Moses took the blood, and put it around on the horns of the altar with his finger, and purified the altar, and poured out the blood at the base of the altar, and sanctified it, to make atonement for it.
- American Standard Version (ASV)
- And he slew it; and Moses took the blood, and put it upon the horns of the altar round about with his finger, and purified the altar, and poured out the blood at the base of the altar, and sanctified it, to make atonement for it.
- Bible in Basic English (BBE)
- And he put it to death; and Moses took the blood and put it on the horns of the altar and round it with his finger, and made the altar clean, draining out the blood at the base of the altar; so he made it holy, taking away what was unclean.
- Darby Translation (DBY)
- and he slaughtered [it], and Moses took the blood, and put [it] on the horns of the altar round about with his finger, and cleansed the altar from sin, and the blood he poured at the bottom of the altar, and hallowed it, making atonement for it.
- Webster's Bible (WBS)
- And he slew [it] ; and Moses took the blood, and put [it] upon the horns of the altar round about with his finger, and purified the altar, and poured the blood at the bottom of the altar, and sanctified it, to make reconciliation upon it.
- Young's Literal Translation (YLT)
- and [one] slaughtereth, and Moses taketh the blood, and putteth on the horns of the altar round about with his finger, and cleanseth the altar, and the blood he hath poured out at the foundation of the altar, and sanctifieth it, to make atonement upon it.
Read in context
- 13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- 14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- 15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- 16ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
- 17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
Cross references
- Leviticus 4:7 ಯಾಜಕಕಾಂಡ 4:7ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Leviticus 4:17–18 ಯಾಜಕಕಾಂಡ 4:17–18ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- 2 Corinthians 5:18–21 2 ಕೊರಿಂಥದವರಿಗೆ 5:18–21ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 2 Chronicles 29:24 2 ಪೂರ್ವಕಾಲವೃತ್ತಾಂತ 29:24ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
- Ephesians 2:16 ಎಫೆಸದವರಿಗೆ 2:16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- Hebrews 9:18–23 ಇಬ್ರಿಯರಿಗೆ 9:18–23ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Ezekiel 43:19–27 ಯೆಹೆಜ್ಕೇಲನು 43:19–27ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು. ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು. ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು. ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು. ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು. ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು. ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 3:2 ಯಾಜಕಕಾಂಡ 3:2ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
- Leviticus 1:11 ಯಾಜಕಕಾಂಡ 1:11ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Leviticus 4:30 ಯಾಜಕಕಾಂಡ 4:30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
- Exodus 29:10–12 ವಿಮೋಚನಕಾಂಡ 29:10–12ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು. ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
Original words (Hebrew)
- slew · H7819שָׁחַט shâchaṭ
- Moses · H4872מֹשֶׁה Môsheh
- took · H3947לָקַח lâqach
- blood · H1818דָּם dâm
- put · H5414נָתַן nâthan
- horns · H7161קֶרֶן qeren
- altar · H4196מִזְבֵּחַ mizbêach
- about · H5439סָבִיב çâbîyb
- finger · H676אֶצְבַּע ʼetsbaʻ
- purified · H2398חָטָא châṭâʼ
- altar · H4196מִזְבֵּחַ mizbêach
- poured · H3332יָצַק yâtsaq
- blood · H1818דָּם dâm
- bottom · H3247יְסוֹד yᵉçôwd
- altar · H4196מִזְבֵּחַ mizbêach
- sanctified · H6942קָדַשׁ qâdash
- reconciliation · H3722כָּפַר kâphar