Leviticus · chapter 8 · verse 2
Leviticus 8:2 in Kannada
ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
Aaronanannoo avanondige avana kumaararannoo karedu udupu galannoo abhisheka tailavannoo paapada baligaagi horiyannoo eradu tagarugalannoo huliyillada rottiya buttiyannoo tegedukondu.
Leviticus 8:2 in English
- King James Version (KJV)
- Take Aaron and his sons with him, and the garments, and the anointing oil, and a bullock for the sin offering, and two rams, and a basket of unleavened bread;
- World English Bible (WEB)
- “Take Aaron and his sons with him, and the garments, and the anointing oil, and the bull of the sin offering, and the two rams, and the basket of unleavened bread;
- American Standard Version (ASV)
- Take Aaron and his sons with him, and the garments, and the anointing oil, and the bullock of the sin-offering, and the two rams, and the basket of unleavened bread;
- Bible in Basic English (BBE)
- Take Aaron, and his sons with him, and the robes and the holy oil and the ox of the sin-offering and the two male sheep and the basket of unleavened bread;
- Darby Translation (DBY)
- Take Aaron and his sons with him, and the garments and the anointing oil, and the bullock of the sin-offering, and the two rams, and the basket of unleavened [bread];
- Webster's Bible (WBS)
- Take Aaron and his sons with him, and the garments, and the anointing oil, and a bullock for the sin-offering, and two rams, and a basket of unleavened bread;
- Young's Literal Translation (YLT)
- 'Take Aaron and his sons with him, and the garments, and the anointing oil, and the bullock of the sin-offering, and the two rams, and the basket of unleavened things,
Read in context
- 1ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --
- 2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- 3ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.
- 4ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.
Cross references
- Exodus 28:2–4 ವಿಮೋಚನಕಾಂಡ 28:2–4ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- Exodus 39:41 ವಿಮೋಚನಕಾಂಡ 39:41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- Exodus 39:1–31 ವಿಮೋಚನಕಾಂಡ 39:1–31ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು. ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು. ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು. (ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು. ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು. ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು. ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು. ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು. ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು. ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು. ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು. ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು. ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು. ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು. ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
- Exodus 40:12–15 ವಿಮೋಚನಕಾಂಡ 40:12–15ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು. ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Exodus 30:23–37 ವಿಮೋಚನಕಾಂಡ 30:23–37ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Original words (Hebrew)
- Take · H3947לָקַח lâqach
- Aaron · H175אַהֲרוֹן ʼAhărôwn
- sons · H1121בֵּן bên
- garments · H899בֶּגֶד beged
- anointing · H4888מִשְׁחָה mishchâh
- oil · H8081שֶׁמֶן shemen
- bullock · H6499פַּר par
- offering · H2403חַטָּאָה chaṭṭâʼâh
- two · H8147שְׁנַיִם shᵉnayim
- rams · H352אַיִל ʼayil
- basket · H5536סַל çal
- bread · H4682מַצָּה matstsâh