Leviticus · chapter 9 · verse 15
Leviticus 9:15 in Kannada
ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
Avanu janara baliyannu tandu, mekeyannu tegedukondu, janarigaagi paapa baliyaagiru vadannu vadhisi, modalaneyadara haage paapakkaagi adannu samarpisidanu.
Leviticus 9:15 in English
- King James Version (KJV)
- And he brought the people’s offering, and took the goat, which [was] the sin offering for the people, and slew it, and offered it for sin, as the first.
- World English Bible (WEB)
- He presented the people’s offering, and took the goat of the sin offering which was for the people, and killed it, and offered it for sin, like the first.
- American Standard Version (ASV)
- And he presented the people’s oblation, and took the goat of the sin-offering which was for the people, and slew it, and offered it for sin, as the first.
- Bible in Basic English (BBE)
- And he made an offering for the people and took the goat of the sin-offering for the people and put it to death, offering it for sin, in the same way as the first.
- Darby Translation (DBY)
- And he presented the people's offering, and took the goat of the sin-offering which was for the people and slaughtered it, and offered it for sin, as the first.
- Webster's Bible (WBS)
- And he brought the people's offering, and took the goat, which [was] the sin-offering for the people, and slew it, and offered it for sin, as the first.
- Young's Literal Translation (YLT)
- And he bringeth near the offering of the people, and taketh the goat of the sin-offering which [is] for the people, and slaughtered it, and maketh it a sin-offering, like the first;
Read in context
- 13ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.
- 14ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
- 15ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
- 16ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.
- 17ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
Cross references
- Leviticus 4:27–31 ಯಾಜಕಕಾಂಡ 4:27–31ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು. ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು. ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 9:3 ಯಾಜಕಕಾಂಡ 9:3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- Hebrews 5:3 ಇಬ್ರಿಯರಿಗೆ 5:3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.