Leviticus · chapter 9 · verse 22
Leviticus 9:22 in Kannada
ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
Aaronanu janara kadege tanna kaigalannu etti avarannu aasheervadisi paapada baliyannoo dahanabaliyannoo samaadhaanada baligalannoo samarpisida mele ilidu bandanu.
Leviticus 9:22 in English
- King James Version (KJV)
- And Aaron lifted up his hand toward the people, and blessed them, and came down from offering of the sin offering, and the burnt offering, and peace offerings.
- World English Bible (WEB)
- Aaron lifted up his hands toward the people, and blessed them; and he came down from offering the sin offering, and the burnt offering, and the peace offerings.
- American Standard Version (ASV)
- And Aaron lifted up his hands toward the people, and blessed them; and he came down from offering the sin-offering, and the burnt-offering, and the peace-offerings.
- Bible in Basic English (BBE)
- And Aaron, lifting up his hands to the people, gave them a blessing; and he came down from offering the sin-offering, and the burned offering, and the peace-offerings.
- Darby Translation (DBY)
- And Aaron lifted up his hands toward the people and blessed them, and came down after the offering of the sin-offering, and the burnt-offering, and the peace-offering.
- Webster's Bible (WBS)
- And Aaron lifted up his hand towards the people, and blessed them; and came down from offering the sin-offering, and the burnt-offering, and peace-offerings.
- Young's Literal Translation (YLT)
- And Aaron lifteth up his hand towards the people, and blesseth them, and cometh down from making the sin-offering, and the burnt-offering, and the peace-offerings.
Read in context
- 20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
- 21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- 22ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
- 23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- 24ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
Cross references
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- Numbers 6:23–27 ಅರಣ್ಯಕಾಂಡ 6:23–27ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- 2 Chronicles 6:3 2 ಪೂರ್ವಕಾಲವೃತ್ತಾಂತ 6:3ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Hebrews 7:6–7 ಇಬ್ರಿಯರಿಗೆ 7:6–7ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 1 Chronicles 23:13 1 ಪೂರ್ವಕಾಲವೃತ್ತಾಂತ 23:13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- Genesis 14:18–20 ಆದಿಕಾಂಡ 14:18–20ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು. ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ. ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- 1 Kings 8:55 1 ಅರಸುಗಳು 8:55ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.