Leviticus · chapter 9 · verse 4
Leviticus 9:4 in Kannada
ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
Kartana munde yajnyakke samaadhaana baligaligaagi horiyannoo tagarannoo saha tegedukollabeku; aahaarada arpaneyu enneyondige beretirabeku; ee dinave kartanu nimage kaanisikolluvanu.
Leviticus 9:4 in English
- King James Version (KJV)
- Also a bullock and a ram for peace offerings, to sacrifice before the LORD; and a meat offering mingled with oil: for to day the LORD will appear unto you.
- World English Bible (WEB)
- and a bull and a ram for peace offerings, to sacrifice before the LORD; and a meal offering mixed with oil: for today the LORD appears to you.’”
- American Standard Version (ASV)
- and an ox and a ram for peace-offerings, to sacrifice before Jehovah; and a meal-offering mingled with oil: for to-day Jehovah appeareth unto you.
- Bible in Basic English (BBE)
- And an ox and a male sheep for peace-offerings, to be put to death before the Lord; and a meal offering mixed with oil: for this day you are to see the Lord.
- Darby Translation (DBY)
- and a bullock and a ram for a peace-offering, to sacrifice before Jehovah; and an oblation mingled with oil; for to-day Jehovah will appear to you.
- Webster's Bible (WBS)
- Also a bullock and a ram for peace-offerings, to sacrifice before the LORD; and a meat-offering mingled with oil: for to-day the LORD will appear to you.
- Young's Literal Translation (YLT)
- and a bullock and a ram for peace-offerings, to sacrifice before Jehovah, and a present mixed with oil; for to-day Jehovah hath appeared unto you.'
Read in context
- 2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- 3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- 4ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
- 5ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.
- 6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
Cross references
- Exodus 29:43 ವಿಮೋಚನಕಾಂಡ 29:43ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- Leviticus 9:6 ಯಾಜಕಕಾಂಡ 9:6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.
- Leviticus 9:23 ಯಾಜಕಕಾಂಡ 9:23ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Exodus 16:10 ವಿಮೋಚನಕಾಂಡ 16:10ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
- Leviticus 2:1–17 ಯಾಜಕಕಾಂಡ 2:1–17ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು. ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- Numbers 15:3–9 ಅರಣ್ಯಕಾಂಡ 15:3–9ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು. ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
- Numbers 14:10 ಅರಣ್ಯಕಾಂಡ 14:10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- 1 Kings 8:10–12 1 ಅರಸುಗಳು 8:10–12ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Exodus 24:16 ವಿಮೋಚನಕಾಂಡ 24:16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.