Luke · chapter 1 · verse 11
Luke 1:11 in Kannada
ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Aaga dhoopa vediya balagadeyalli nintukondidda kartana dootanu avanige kaanisikondanu.
Luke 1:11 in English
- King James Version (KJV)
- And there appeared unto him an angel of the Lord standing on the right side of the altar of incense.
- World English Bible (WEB)
- An angel of the Lord appeared to him, standing on the right side of the altar of incense.
- American Standard Version (ASV)
- And there appeared unto him an angel of the Lord standing on the right side of the altar of incense.
- Bible in Basic English (BBE)
- And he saw an angel of the Lord in his place on the right side of the altar.
- Darby Translation (DBY)
- And an angel of [the] Lord appeared to him, standing on the right of the altar of incense.
- Webster's Bible (WBS)
- And there appeared to him an angel of the Lord, standing on the right side of the altar of incense.
- Young's Literal Translation (YLT)
- And there appeared to him a messenger of the Lord standing on the right side of the altar of the perfume,
Read in context
- 9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
- 10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- 11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- 13ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
Cross references
- Acts 10:3–4 ಅಪೊಸ್ತಲರ ಕೃತ್ಯಗಳು 10:3–4ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Exodus 40:26–27 ವಿಮೋಚನಕಾಂಡ 40:26–27ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
- Judges 13:9 ನ್ಯಾಯಸ್ಥಾಪಕರು 13:9ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
- Revelation 9:13 ಪ್ರಕಟನೆ 9:13ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು.
- Exodus 30:1–10 ವಿಮೋಚನಕಾಂಡ 30:1–10ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Leviticus 16:13 ಯಾಜಕಕಾಂಡ 16:13ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Revelation 8:3–4 ಪ್ರಕಟನೆ 8:3–4ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?