Luke · chapter 1 · verse 29
Luke 1:29 in Kannada
ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
Aakeyu avanannu nodi avana maatige kalavalagondu idu enthaataravaada vandane endu tanna manadalli yochisuttiruvaaga
Luke 1:29 in English
- King James Version (KJV)
- And when she saw [him], she was troubled at his saying, and cast in her mind what manner of salutation this should be.
- World English Bible (WEB)
- But when she saw him, she was greatly troubled at the saying, and considered what kind of salutation this might be.
- American Standard Version (ASV)
- But she was greatly troubled at the saying, and cast in her mind what manner of salutation this might be.
- Bible in Basic English (BBE)
- But she was greatly troubled at his words, and said to herself, What may be the purpose of these words?
- Darby Translation (DBY)
- But she, [seeing] [the angel], was troubled at his word, and reasoned in her mind what this salutation might be.
- Webster's Bible (WBS)
- And when she saw [him] , she was troubled at his saying, and cast in her mind what manner of salutation this should be.
- Young's Literal Translation (YLT)
- and she, having seen, was troubled at his word, and was reasoning of what kind this salutation may be.
Read in context
- 27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
- 28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- 29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- 30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- 31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
Cross references
- Acts 10:17 ಅಪೊಸ್ತಲರ ಕೃತ್ಯಗಳು 10:17ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
- Luke 1:12 ಲೂಕನು 1:12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Mark 6:49–50 ಮಾರ್ಕನು 6:49–50ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು. ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Luke 1:66 ಲೂಕನು 1:66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Mark 16:5–6 ಮಾರ್ಕನು 16:5–6ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- 1 Samuel 9:20–21 1 ಸಮುವೇಲನು 9:20–21ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು. ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
- Judges 6:13–15 ನ್ಯಾಯಸ್ಥಾಪಕರು 6:13–15ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು. ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು. ಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು.