Luke · chapter 1 · verse 46
Luke 1:46 in Kannada
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
Aaga mariyalu--nanna praanavu kartanannu ghanapadisuttade;
Luke 1:46 in English
- King James Version (KJV)
- And Mary said, My soul doth magnify the Lord,
- World English Bible (WEB)
- Mary said, “My soul magnifies the Lord.
- American Standard Version (ASV)
- And Mary said, My soul doth magnify the Lord,
- Bible in Basic English (BBE)
- And Mary said: My soul gives glory to God;
- Darby Translation (DBY)
- And Mary said, My soul magnifies the Lord,
- Webster's Bible (WBS)
- And Mary said, My soul doth magnify the Lord,
- Young's Literal Translation (YLT)
- And Mary said, 'My soul doth magnify the Lord,
Read in context
- 44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
- 45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- 46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
- 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
Cross references
- 1 Samuel 2:1–10 1 ಸಮುವೇಲನು 2:1–10ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು. ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ. ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ. ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ. ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು. ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ. ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ. ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು. ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Psalm 34:2–3 ಕೀರ್ತನೆಗಳು 34:2–3ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- Psalm 35:9 ಕೀರ್ತನೆಗಳು 35:9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Romans 5:11 ರೋಮಾಪುರದವರಿಗೆ 5:11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- Isaiah 45:25 ಯೆಶಾಯ 45:25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- 1 Corinthians 1:31 1 ಕೊರಿಂಥದವರಿಗೆ 1:31ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Isaiah 24:15–16 ಯೆಶಾಯ 24:15–16ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.