Luke · chapter 1 · verse 52
Luke 1:52 in Kannada
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
Balishtha rannu avara sthaanagalinda kelage dobbi deenarannu melakke ettiddaane.
Luke 1:52 in English
- King James Version (KJV)
- He hath put down the mighty from [their] seats, and exalted them of low degree.
- World English Bible (WEB)
- He has put down princes from their thrones, and has exalted the lowly.
- American Standard Version (ASV)
- He hath put down princes from [their] thrones, And hath exalted them of low degree.
- Bible in Basic English (BBE)
- He has put down kings from their seats, lifting up on high the men of low degree.
- Darby Translation (DBY)
- He has put down rulers from thrones, and exalted the lowly.
- Webster's Bible (WBS)
- He hath put down the mighty from [their] seats, and exalted them of low degree.
- Young's Literal Translation (YLT)
- He brought down the mighty from thrones, And He exalted the lowly,
Read in context
- 50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- 51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- 52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- 53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- 54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
Cross references
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- James 4:10 ಯಾಕೋಬನು 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Psalm 107:40–41 ಕೀರ್ತನೆಗಳು 107:40–41ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ. ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- 1 Samuel 2:6–8 1 ಸಮುವೇಲನು 2:6–8ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ. ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Ecclesiastes 4:14 ಪ್ರಸಂಗಿ 4:14ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
- Psalm 113:6–8 ಕೀರ್ತನೆಗಳು 113:6–8ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ. ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 1 Samuel 2:4 1 ಸಮುವೇಲನು 2:4ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- Job 5:11–13 ಯೋಬನು 5:11–13ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ. ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- James 1:9–10 ಯಾಕೋಬನು 1:9–10ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
- Job 34:24–28 ಯೋಬನು 34:24–28ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ. ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.