Luke · chapter 1 · verse 53
Luke 1:53 in Kannada
ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
Hasidavarannu olleyavu galinda truptipadisi aishvaryavantarannu baridaagi kaluhisibittiddaane.
Luke 1:53 in English
- King James Version (KJV)
- He hath filled the hungry with good things; and the rich he hath sent empty away.
- World English Bible (WEB)
- He has filled the hungry with good things. He has sent the rich away empty.
- American Standard Version (ASV)
- The hungry he hath filled with good things; And the rich he hath sent empty away.
- Bible in Basic English (BBE)
- Those who had no food he made full of good things; the men of wealth he sent away with nothing in their hands;
- Darby Translation (DBY)
- He has filled the hungry with good things, and sent away the rich empty.
- Webster's Bible (WBS)
- He hath filled the hungry with good things, and the rich he hath sent away empty.
- Young's Literal Translation (YLT)
- The hungry He did fill with good, And the rich He sent away empty,
Read in context
- 51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- 52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- 53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- 54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
- 55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
Cross references
- Psalm 107:8–9 ಕೀರ್ತನೆಗಳು 107:8–9ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ. ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- Luke 6:21 ಲೂಕನು 6:21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Luke 6:24 ಲೂಕನು 6:24ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
- John 6:35 ಯೋಹಾನನು 6:35ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.
- 1 Corinthians 1:26 1 ಕೊರಿಂಥದವರಿಗೆ 1:26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- James 2:5–6 ಯಾಕೋಬನು 2:5–6ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Luke 18:24–25 ಲೂಕನು 18:24–25ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- James 5:1–6 ಯಾಕೋಬನು 5:1–6ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- John 6:11–13 ಯೋಹಾನನು 6:11–13ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.