Luke · chapter 1 · verse 54
Luke 1:54 in Kannada
ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
Tanna karuneya jnyaapakaartha vaagi tanna sevakanaada israayelanige sahaaya maadiddaane.
Luke 1:54 in English
- King James Version (KJV)
- He hath holpen his servant Israel, in remembrance of [his] mercy;
- World English Bible (WEB)
- He has given help to Israel, his servant, that he might remember mercy,
- American Standard Version (ASV)
- He hath given help to Israel his servant, That he might remember mercy
- Bible in Basic English (BBE)
- His help he has given to Israel, his servant, so that he might keep in mind his mercy to Abraham and his seed for ever,
- Darby Translation (DBY)
- He has helped Israel his servant, in order to remember mercy,
- Webster's Bible (WBS)
- He hath sustained his servant Israel, in remembrance of [his] mercy;
- Young's Literal Translation (YLT)
- He received again Israel His servant, To remember kindness,
Read in context
- 52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- 53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- 54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
- 55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- 56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
Cross references
- Psalm 98:3 ಕೀರ್ತನೆಗಳು 98:3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Isaiah 44:21 ಯೆಶಾಯ 44:21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- Isaiah 46:3–4 ಯೆಶಾಯ 46:3–4ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 49:14–16 ಯೆಶಾಯ 49:14–16ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
- Isaiah 63:7–16 ಯೆಶಾಯ 63:7–16ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ. ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ? ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Zephaniah 3:14–20 ಚೆಫನ್ಯ 3:14–20ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Luke 1:70–75 ಲೂಕನು 1:70–75ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Isaiah 54:6–10 ಯೆಶಾಯ 54:6–10ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.