Luke · chapter 1 · verse 55
Luke 1:55 in Kannada
ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
Idallade namma pitrugaligoo abra haamanigoo avana santatigoo sadaakaalakke aatanu helidante maadiddaane andalu.
Luke 1:55 in English
- King James Version (KJV)
- As he spake to our fathers, to Abraham, and to his seed for ever.
- World English Bible (WEB)
- as he spoke to our fathers, to Abraham and his offspring forever.”
- American Standard Version (ASV)
- (As he spake unto our fathers) Toward Abraham and his seed for ever.
- Bible in Basic English (BBE)
- As he gave his word to our fathers.
- Darby Translation (DBY)
- (as he spoke to our fathers,) to Abraham and to his seed for ever.
- Webster's Bible (WBS)
- As he spoke to our fathers, to Abraham, and to his seed for ever.
- Young's Literal Translation (YLT)
- As He spake unto our fathers, To Abraham and to his seed — to the age.'
Read in context
- 53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- 54ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
- 55ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- 56ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
- 57ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
Cross references
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Psalm 105:6–10 ಕೀರ್ತನೆಗಳು 105:6–10ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
- Galatians 3:16–17 ಗಲಾತ್ಯದವರಿಗೆ 3:16–17ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ. ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Psalm 132:11–17 ಕೀರ್ತನೆಗಳು 132:11–17ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು. ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ. ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು. ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು. ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Romans 11:28–29 ರೋಮಾಪುರದವರಿಗೆ 11:28–29ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.