Luke · chapter 1 · verse 69
Luke 1:69 in Kannada
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
Aatanu tanna sevakanaada daaveedana manetanadalli namagaagi rakshaneya kombannu etti ddaane.
Luke 1:69 in English
- King James Version (KJV)
- And hath raised up an horn of salvation for us in the house of his servant David;
- World English Bible (WEB)
- and has raised up a horn of salvation for us in the house of his servant David
- American Standard Version (ASV)
- And hath raised up a horn of salvation for us In the house of his servant David
- Bible in Basic English (BBE)
- Lifting up a horn of salvation for us in the house of his servant David,
- Darby Translation (DBY)
- and raised up a horn of deliverance for us in the house of David his servant;
- Webster's Bible (WBS)
- And hath raised up a horn of salvation for us, in the house of his servant David:
- Young's Literal Translation (YLT)
- And did raise an horn of salvation to us, In the house of David His servant,
Read in context
- 67ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
- 68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- 69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- 70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Ezekiel 29:21 ಯೆಹೆಜ್ಕೇಲನು 29:21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- 2 Samuel 22:3 2 ಸಮುವೇಲನು 22:3ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Jeremiah 33:15–26 ಯೆರೆಮೀಯ 33:15–26ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ-- ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Isaiah 11:1–9 ಯೆಶಾಯ 11:1–9ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ. ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Mark 11:10 ಮಾರ್ಕನು 11:10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;