Luke · chapter 1 · verse 71
Luke 1:71 in Kannada
ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
Naavu namma shatrugalindaloo nammannu hage maaduvavara kaiyindaloo rakshisalpaduvante
Luke 1:71 in English
- King James Version (KJV)
- That we should be saved from our enemies, and from the hand of all that hate us;
- World English Bible (WEB)
- salvation from our enemies and from the hand of all who hate us;
- American Standard Version (ASV)
- Salvation from our enemies, and from the hand of all that hate us;
- Bible in Basic English (BBE)
- Salvation from those who are against us, and from the hands of those who have hate for us;
- Darby Translation (DBY)
- deliverance from our enemies and out of the hand of all who hate us;
- Webster's Bible (WBS)
- That we should be saved from our enemies, and from the hand of all that hate us;
- Young's Literal Translation (YLT)
- Salvation from our enemies, And out of the hand of all hating us,
Read in context
- 69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- 70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- 72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- 73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
Cross references
- Psalm 106:10 ಕೀರ್ತನೆಗಳು 106:10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
- Zephaniah 3:15–20 ಚೆಫನ್ಯ 3:15–20ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Jeremiah 32:37 ಯೆರೆಮೀಯ 32:37ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
- Ezekiel 34:28 ಯೆಹೆಜ್ಕೇಲನು 34:28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Jeremiah 30:9–11 ಯೆರೆಮೀಯ 30:9–11ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು. ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Luke 1:74 ಲೂಕನು 1:74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Isaiah 14:1–3 ಯೆಶಾಯ 14:1–3ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು. ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
- Isaiah 54:7–17 ಯೆಶಾಯ 54:7–17ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ. ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು. ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು. ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ. ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.