Luke · chapter 1 · verse 72
Luke 1:72 in Kannada
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
Namma pitrugalige vaagdaana maadida karuneyanu neraverisalu tanna parishuddha odambadikeyannu nenapige tandu
Luke 1:72 in English
- King James Version (KJV)
- To perform the mercy [promised] to our fathers, and to remember his holy covenant;
- World English Bible (WEB)
- to show mercy toward our fathers, to remember his holy covenant,
- American Standard Version (ASV)
- To show mercy towards our fathers, And to remember his holy covenant;
- Bible in Basic English (BBE)
- To do acts of mercy to our fathers and to keep in mind his holy word,
- Darby Translation (DBY)
- to fulfil mercy with our fathers and remember his holy covenant,
- Webster's Bible (WBS)
- To perform the mercy [promised] to our fathers, and to remember his holy covenant:
- Young's Literal Translation (YLT)
- To do kindness with our fathers, And to be mindful of His holy covenant,
Read in context
- 70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- 71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- 72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- 73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- 74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
Cross references
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Leviticus 26:42 ಯಾಜಕಕಾಂಡ 26:42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Ezekiel 16:60 ಯೆಹೆಜ್ಕೇಲನು 16:60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Romans 11:28 ರೋಮಾಪುರದವರಿಗೆ 11:28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- Acts 3:25–26 ಅಪೊಸ್ತಲರ ಕೃತ್ಯಗಳು 3:25–26ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Psalm 105:8–10 ಕೀರ್ತನೆಗಳು 105:8–10ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--