Luke · chapter 1 · verse 74
Luke 1:74 in Kannada
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
Naavu namma shatrugala kaiyinda bidisalpattu bhayavilladavaraagi
Luke 1:74 in English
- King James Version (KJV)
- That he would grant unto us, that we being delivered out of the hand of our enemies might serve him without fear,
- World English Bible (WEB)
- to grant to us that we, being delivered out of the hand of our enemies, should serve him without fear,
- American Standard Version (ASV)
- To grant unto us that we being delivered out of the hand of our enemies Should serve him without fear,
- Bible in Basic English (BBE)
- That we, being made free from the fear of those who are against us, might give him worship,
- Darby Translation (DBY)
- to give us, that, saved out of the hand of our enemies, we should serve him without fear
- Webster's Bible (WBS)
- That he would grant to us, that we being delivered out of the hand of our enemies, might serve him without fear,
- Young's Literal Translation (YLT)
- To give to us, without fear, Out of the hand of our enemies having been delivered,
Read in context
- 72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- 73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- 74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- 75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
Cross references
- Zephaniah 3:15–17 ಚೆಫನ್ಯ 3:15–17ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- 2 Timothy 1:7 2 ತಿಮೊಥೆಯನಿಗೆ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
- Isaiah 54:13–14 ಯೆಶಾಯ 54:13–14ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Romans 8:15 ರೋಮಾಪುರದವರಿಗೆ 8:15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Hebrews 2:15 ಇಬ್ರಿಯರಿಗೆ 2:15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
- Zechariah 9:8–10 ಜೆಕರ್ಯ 9:8–10ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ. ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ. ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Luke 1:71 ಲೂಕನು 1:71ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
- Ezekiel 34:25–28 ಯೆಹೆಜ್ಕೇಲನು 34:25–28ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Ezekiel 39:28–29 ಯೆಹೆಜ್ಕೇಲನು 39:28–29ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 35:9–10 ಯೆಶಾಯ 35:9–10ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.