Luke · chapter 1 · verse 75
Luke 1:75 in Kannada
ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
Namma jeevamaanada ellaa dinagalalli aatana munde parishuddhateyindaloo neetiyindaloo aatanannu sevisuvavaraaguvadakke aatanu anugrahi suvanu.
Luke 1:75 in English
- King James Version (KJV)
- In holiness and righteousness before him, all the days of our life.
- World English Bible (WEB)
- in holiness and righteousness before him all the days of our life.
- American Standard Version (ASV)
- In holiness and righteousness before him all our days.
- Bible in Basic English (BBE)
- In righteousness and holy living before him all our days.
- Darby Translation (DBY)
- in piety and righteousness before him all our days.
- Webster's Bible (WBS)
- In holiness and righteousness before him, all the days of our life.
- Young's Literal Translation (YLT)
- To serve Him, in holiness and righteousness Before Him, all the days of our life.
Read in context
- 73ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
- 74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- 75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- 77ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
Cross references
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Titus 2:11–14 ತೀತನಿಗೆ 2:11–14ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Jeremiah 31:33–34 ಯೆರೆಮೀಯ 31:33–34ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Psalm 105:44–45 ಕೀರ್ತನೆಗಳು 105:44–45ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- 2 Peter 1:4–8 2 ಪೇತ್ರನು 1:4–8ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.