Luke · chapter 1 · verse 9
Luke 1:9 in Kannada
ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
Yaajakodyogada paddhatiya prakaara avanu kartana aalayadalli praveshisi dhoopavannu suduvadu avana paalige bantu.
Luke 1:9 in English
- King James Version (KJV)
- According to the custom of the priest’s office, his lot was to burn incense when he went into the temple of the Lord.
- World English Bible (WEB)
- according to the custom of the priest’s office, his lot was to enter into the temple of the Lord and burn incense.
- American Standard Version (ASV)
- according to the custom of the priest’s office, his lot was to enter into the temple of the Lord and burn incense.
- Bible in Basic English (BBE)
- And as was the way of the priests, he had to go into the Temple to see to the burning of perfumes.
- Darby Translation (DBY)
- it fell to him by lot, according to the custom of the priesthood, to enter into the temple of the Lord to burn incense.
- Webster's Bible (WBS)
- According to the custom of the priests' office, his lot was to burn incense when he went into the temple of the Lord.
- Young's Literal Translation (YLT)
- according to the custom of the priesthood, his lot was to make perfume, having gone into the sanctuary of the Lord,
Read in context
- 7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- 8ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
- 9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
- 10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- 11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Cross references
- 2 Chronicles 29:11 2 ಪೂರ್ವಕಾಲವೃತ್ತಾಂತ 29:11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- Exodus 30:7–8 ವಿಮೋಚನಕಾಂಡ 30:7–8ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- 1 Chronicles 23:13 1 ಪೂರ್ವಕಾಲವೃತ್ತಾಂತ 23:13ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Hebrews 9:6 ಇಬ್ರಿಯರಿಗೆ 9:6ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
- 2 Chronicles 26:16 2 ಪೂರ್ವಕಾಲವೃತ್ತಾಂತ 26:16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- 1 Chronicles 6:49 1 ಪೂರ್ವಕಾಲವೃತ್ತಾಂತ 6:49ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
- Exodus 37:25–29 ವಿಮೋಚನಕಾಂಡ 37:25–29ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು. ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.