Luke · chapter 10 · verse 1
Luke 10:1 in Kannada
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
Ivugalaada mele kartanu bere eppattu mandiyannu saha nemisi taane svatah hogabekendidda pratiyondu pattanakkoo sthalakkoo ibbibbarannaagi tanna mundaagi kaluhisidanu.
Luke 10:1 in English
- King James Version (KJV)
- After these things the Lord appointed other seventy also, and sent them two and two before his face into every city and place, whither he himself would come.
- World English Bible (WEB)
- Now after these things, the Lord also appointed seventy others, and sent them two by two ahead of him into every city and place where he was about to come.
- American Standard Version (ASV)
- Now after these things the Lord appointed seventy others, and sent them two and two before his face into every city and place, whither he himself was about to come.
- Bible in Basic English (BBE)
- Now after these things, the Lord made selection of seventy others and sent them before him, two together, into every town and place where he himself was about to come.
- Darby Translation (DBY)
- Now after these things the Lord appointed seventy others also, and sent them two and two before his face into every city and place where he himself was about to come.
- Webster's Bible (WBS)
- After these things, the Lord appointed other seventy also, and sent them two and two before his face into every city, and place, whither he himself would come.
- Young's Literal Translation (YLT)
- And after these things, the Lord did appoint also other seventy, and sent them by twos before his face, to every city and place whither he himself was about to come,
Read in context
- 1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- 2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- 3ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
Cross references
- Mark 6:7–13 ಮಾರ್ಕನು 6:7–13ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು. ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು. ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ. ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು. ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
- Luke 9:52 ಲೂಕನು 9:52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
- Matthew 10:1–4 ಮತ್ತಾಯನು 10:1–4ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು. ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ, ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Numbers 11:24–26 ಅರಣ್ಯಕಾಂಡ 11:24–26ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು. ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- Luke 3:4–6 ಲೂಕನು 3:4–6ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Numbers 11:16 ಅರಣ್ಯಕಾಂಡ 11:16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- Luke 9:1–2 ಲೂಕನು 9:1–2ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Revelation 11:3–10 ಪ್ರಕಟನೆ 11:3–10ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Acts 13:2–4 ಅಪೊಸ್ತಲರ ಕೃತ್ಯಗಳು 13:2–4ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
Original words (Greek)
- After · G3326μετά metá
- things · G5023ταῦτα taûta
- Lord · G2962κύριος kýrios
- appointed · G322ἀναδείκνυμι anadeíknymi
- other · G2087ἕτερος héteros
- seventy · G1440ἑβδομήκοντα hebdomḗkonta
- also · G2532καί kaí
- and · G2532καί kaí
- sent · G649ἀποστέλλω apostéllō
- them · G846αὐτός autós
- two · G1417δύο dýo
- and · G303ἀνά aná
- two · G1417δύο dýo
- before · G4253πρό pró
- his · G846αὐτός autós
- face · G4383πρόσωπον prósōpon
- into · G1519εἰς eis
- every · G3956πᾶς pâs
- city · G4172πόλις pólis
- and · G2532καί kaí
- place · G5117τόπος tópos
- whither · G3739ὅς hós
- he · G3195μέλλω méllō
- himself · G846αὐτός autós
- would · G3195μέλλω méllō
- come · G2064ἔρχομαι érchomai