Luke · chapter 10 · verse 19
Luke 10:19 in Kannada
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
Igo, sarpagalannoo chelugalannoo tuliyuvadakke mattu virodhiya ellaa shaktiya mele naanu nimage adhikaara koduttene; yaavadoo yaava reetiyalliyoo nimage kedu maada laaradu.
Luke 10:19 in English
- King James Version (KJV)
- Behold, I give unto you power to tread on serpents and scorpions, and over all the power of the enemy: and nothing shall by any means hurt you.
- World English Bible (WEB)
- Behold, I give you authority to tread on serpents and scorpions, and over all the power of the enemy. Nothing will in any way hurt you.
- American Standard Version (ASV)
- Behold, I have given you authority to tread upon serpents and scorpions, and over all the power of the enemy: and nothing shall in any wise hurt you.
- Bible in Basic English (BBE)
- See, I have given you power to put your feet on snakes and evil beasts, and over all the strength of him who is against you: and nothing will do you damage.
- Darby Translation (DBY)
- Behold, I give you the power of treading upon serpents and scorpions and over all the power of the enemy, and nothing shall in anywise injure you.
- Webster's Bible (WBS)
- Behold, I give to you power to tread on serpents and scorpions, and over all the power of the enemy: and nothing shall by any means hurt you.
- Young's Literal Translation (YLT)
- lo, I give to you the authority to tread upon serpents and scorpions, and on all the power of the enemy, and nothing by any means shall hurt you;
Read in context
- 17ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
- 18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
- 19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
- 20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- 21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
Cross references
- Psalm 91:13 ಕೀರ್ತನೆಗಳು 91:13ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Acts 28:5 ಅಪೊಸ್ತಲರ ಕೃತ್ಯಗಳು 28:5ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- Revelation 11:5 ಪ್ರಕಟನೆ 11:5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- Luke 21:17–18 ಲೂಕನು 21:17–18ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Romans 8:31–39 ರೋಮಾಪುರದವರಿಗೆ 8:31–39ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ? ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ; ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Isaiah 11:8 ಯೆಶಾಯ 11:8ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.