Luke · chapter 10 · verse 29
Luke 10:29 in Kannada
ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
Aadare avanu tannannu taane neetivantanendu torisu vadakke apeksheyullavanaagi yesuvige--nana nereyavanu yaaru endu kelidanu.
Luke 10:29 in English
- King James Version (KJV)
- But he, willing to justify himself, said unto Jesus, And who is my neighbour?
- World English Bible (WEB)
- But he, desiring to justify himself, asked Jesus, “Who is my neighbor?”
- American Standard Version (ASV)
- But he, desiring to justify himself, said unto Jesus, And who is my neighbor?
- Bible in Basic English (BBE)
- But he, desiring to put himself in the right, said to Jesus, And who is my neighbour?
- Darby Translation (DBY)
- But he, desirous of justifying himself, said to Jesus, And who is my neighbour?
- Webster's Bible (WBS)
- But he, willing to justify himself, said to Jesus, And who is my neighbor?
- Young's Literal Translation (YLT)
- And he, willing to declare himself righteous, said unto Jesus, 'And who is my neighbour?'
Read in context
- 27ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
- 28ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
- 29ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
- 30ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
- 31ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
Cross references
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Luke 18:9–11 ಲೂಕನು 18:9–11ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Matthew 5:43–44 ಮತ್ತಾಯನು 5:43–44ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Galatians 3:11 ಗಲಾತ್ಯದವರಿಗೆ 3:11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Luke 10:36 ಲೂಕನು 10:36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- James 2:24 ಯಾಕೋಬನು 2:24ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
- Job 32:2 ಯೋಬನು 32:2ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.