Luke · chapter 10 · verse 34
Luke 10:34 in Kannada
ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
Avana balige hogi enneyannoo draakshaarasa vannoo hoydu avana gaayagalannu katti tanna svanta pashuvina mele koodrisi vasati gruhakke tandu avanannu aaraike maadidanu.
Luke 10:34 in English
- King James Version (KJV)
- And went to [him], and bound up his wounds, pouring in oil and wine, and set him on his own beast, and brought him to an inn, and took care of him.
- World English Bible (WEB)
- came to him, and bound up his wounds, pouring on oil and wine. He set him on his own animal, brought him to an inn, and took care of him.
- American Standard Version (ASV)
- and came to him, and bound up his wounds, pouring on [them] oil and wine; and he set him on his own beast, and brought him to an inn, and took care of him.
- Bible in Basic English (BBE)
- And came to him and put clean linen round his wounds, with oil and wine; and he put him on his beast and took him to a house and took care of him.
- Darby Translation (DBY)
- and came up [to him] and bound up his wounds, pouring in oil and wine; and having put him on his own beast, took him to [the] inn and took care of him.
- Webster's Bible (WBS)
- And went to [him] , and bound up his wounds, pouring in oil and wine, and set him on his own beast, and brought him to an inn, and took care of him.
- Young's Literal Translation (YLT)
- and having come near, he bound up his wounds, pouring on oil and wine, and having lifted him up on his own beast, he brought him to an inn, and was careful of him;
Read in context
- 32ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
- 33ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
- 34ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
- 35ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
- 36ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
Cross references
- Romans 12:20 ರೋಮಾಪುರದವರಿಗೆ 12:20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Genesis 42:27 ಆದಿಕಾಂಡ 42:27ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.
- Exodus 4:24 ವಿಮೋಚನಕಾಂಡ 4:24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Matthew 5:43–45 ಮತ್ತಾಯನು 5:43–45ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- Mark 14:8 ಮಾರ್ಕನು 14:8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- Proverbs 25:21–22 ಜ್ಞಾನೋಕ್ತಿಗಳು 25:21–22ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು. ಅವನ ತಲೆಯ ಮೇಲೆ ಬೆಂಕಿಯ ಕೆಂಡಗಳನ್ನು ಹಾಕುವಿ; ಕರ್ತನು ನಿನಗೆ ಪ್ರತಿಫಲ ಕೊಡುವನು.