Luke · chapter 10 · verse 7
Luke 10:7 in Kannada
ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
Ade maneyalliddu avaru kottaddannu tindu kudiyiri; yaakandare kelasadavanu tanna koolige yogyanu. Maneyinda manege hoga bediri;
Luke 10:7 in English
- King James Version (KJV)
- And in the same house remain, eating and drinking such things as they give: for the labourer is worthy of his hire. Go not from house to house.
- World English Bible (WEB)
- Remain in that same house, eating and drinking the things they give, for the laborer is worthy of his wages. Don’t go from house to house.
- American Standard Version (ASV)
- And in that same house remain, eating and drinking such things as they give: for the laborer is worthy of his hire. Go not from house to house.
- Bible in Basic English (BBE)
- And keep in that same house, taking what food and drink they give you: for the worker has a right to his reward. Do not go from house to house.
- Darby Translation (DBY)
- And in the same house abide, eating and drinking such things as they have; for the workman is worthy of his hire. Remove not from house to house.
- Webster's Bible (WBS)
- And in the same house remain, eating and drinking such things as they give: for the laborer is worthy of his hire. Go not from house to house.
- Young's Literal Translation (YLT)
- 'And in that house remain, eating and drinking the things they have, for worthy [is] the workman of his hire; go not from house to house,
Read in context
- 5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- 6ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- 7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- 8ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
- 9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
Cross references
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- Matthew 10:10–11 ಮತ್ತಾಯನು 10:10–11ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ. ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
- 1 Corinthians 9:4–15 1 ಕೊರಿಂಥದವರಿಗೆ 9:4–15ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ? ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ? ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ? ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು. ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 2 Timothy 2:6 2 ತಿಮೊಥೆಯನಿಗೆ 2:6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Deuteronomy 12:18–19 ಧರ್ಮೋಪದೇಶಕಾಂಡ 12:18–19ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- 3 John 1:5–8 3 ಯೋಹಾನನು 1:5–8ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ. ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ. ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- Mark 6:10 ಮಾರ್ಕನು 6:10ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
- Acts 16:15 ಅಪೊಸ್ತಲರ ಕೃತ್ಯಗಳು 16:15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- Acts 16:34 ಅಪೊಸ್ತಲರ ಕೃತ್ಯಗಳು 16:34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- Luke 9:4 ಲೂಕನು 9:4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
- Philippians 4:17–18 ಫಿಲಿಪ್ಪಿಯವರಿಗೆ 4:17–18ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ