Luke · chapter 11 · verse 15
Luke 11:15 in Kannada
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Aadare avaralli kelavaru--devvagala adhipatiyaada belje boolaninda avanu devvagalannu bidisuttaane andaru.
Luke 11:15 in English
- King James Version (KJV)
- But some of them said, He casteth out devils through Beelzebub the chief of the devils.
- World English Bible (WEB)
- But some of them said, “He casts out demons by Beelzebul, the prince of the demons.”
- American Standard Version (ASV)
- But some of them said, By Beelzebub the prince of the demons casteth he out demons.
- Bible in Basic English (BBE)
- But some of them said, He sends out evil spirits by Beelzebul, the ruler of evil spirits.
- Darby Translation (DBY)
- But some from among them said, By Beelzebub the prince of the demons casts he out demons.
- Webster's Bible (WBS)
- But some of them said, He casteth out demons through Beelzebub, the chief of the demons.
- Young's Literal Translation (YLT)
- and certain of them said, 'By Beelzeboul, ruler of the demons, he doth cast forth the demons;'
Read in context
- 13ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- 14ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
- 15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- 17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
Cross references
- Matthew 9:34 ಮತ್ತಾಯನು 9:34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- John 10:20 ಯೋಹಾನನು 10:20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- John 8:48 ಯೋಹಾನನು 8:48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
- Mark 3:22–30 ಮಾರ್ಕನು 3:22–30ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು. ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ? ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು. ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು. ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು; ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು. ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
- Luke 11:18–19 ಲೂಕನು 11:18–19ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- John 8:52 ಯೋಹಾನನು 8:52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Matthew 12:24–30 ಮತ್ತಾಯನು 12:24–30ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು. ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ. ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು? ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು. ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ. ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು. ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- John 7:20 ಯೋಹಾನನು 7:20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.