Luke · chapter 11 · verse 17
Luke 11:17 in Kannada
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
Aadare aatanu avara alochanegalannu tilidavanaagi avarige--tannalli virodhavaagi vibhaagisalpatta pratiyondu raajyavu haalaaguvadu; ondu maneyu tanage virodhavaagi vibhaagisalpattare adu biddu hoguvadu.
Luke 11:17 in English
- King James Version (KJV)
- But he, knowing their thoughts, said unto them, Every kingdom divided against itself is brought to desolation; and a house [divided] against a house falleth.
- World English Bible (WEB)
- But he, knowing their thoughts, said to them, “Every kingdom divided against itself is brought to desolation. A house divided against itself falls.
- American Standard Version (ASV)
- But he, knowing their thoughts, said unto them, Every kingdom divided against itself is brought to desolation; and a house [divided] against a house falleth.
- Bible in Basic English (BBE)
- But he, having knowledge of their thoughts, said to them, Every kingdom in which there is division is made waste; and a house in which there is division comes to destruction.
- Darby Translation (DBY)
- But he, knowing their thoughts, said to them, Every kingdom divided against itself is brought to desolation: and a house set against a house falls;
- Webster's Bible (WBS)
- But he, knowing their thoughts, said to them, Every kingdom divided against itself is brought to desolation; and a house [divided] against a house falleth.
- Young's Literal Translation (YLT)
- And he, knowing their thoughts, said to them, 'Every kingdom having been divided against itself is desolated; and house against house doth fall;
Read in context
- 15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 16ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
- 17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- 18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
- 19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
Cross references
- Mark 3:23–27 ಮಾರ್ಕನು 3:23–27ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ? ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು. ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು. ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
- Matthew 12:25–29 ಮತ್ತಾಯನು 12:25–29ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ. ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು? ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು. ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ. ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- Isaiah 19:2–3 ಯೆಶಾಯ 19:2–3ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು. ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- John 2:25 ಯೋಹಾನನು 2:25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Isaiah 9:20–21 ಯೆಶಾಯ 9:20–21ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 2 Chronicles 13:16–17 2 ಪೂರ್ವಕಾಲವೃತ್ತಾಂತ 13:16–17ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು. ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- 2 Chronicles 10:16–19 2 ಪೂರ್ವಕಾಲವೃತ್ತಾಂತ 10:16–19ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು. ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.