Luke · chapter 11 · verse 19
Luke 11:19 in Kannada
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
Naanu beljeboolaninda devvagalannu bidisuvadaadare nimma putraru yaarinda avugalannu bidisuttaare? Aadadarinda avare nimage nyaaya teerisuvavaraagiruvaru.
Luke 11:19 in English
- King James Version (KJV)
- And if I by Beelzebub cast out devils, by whom do your sons cast them out? therefore shall they be your judges.
- World English Bible (WEB)
- But if I cast out demons by Beelzebul, by whom do your children cast them out? Therefore they will be your judges.
- American Standard Version (ASV)
- And if I by Beelzebub cast out demons, by whom do your sons cast them out? therefore shall they be your judges.
- Bible in Basic English (BBE)
- And if I, by Beelzebul, send out evil spirits, by whose help do your sons send them out? so let them be your judges.
- Darby Translation (DBY)
- But if I by Beelzebub cast out demons, your sons — by whom do they cast [them] out? For this reason they shall be your judges.
- Webster's Bible (WBS)
- And if I by Beelzebub cast out demons, by whom do your sons cast [them] out? therefore shall they be your judges.
- Young's Literal Translation (YLT)
- 'But if I by Beelzeboul cast forth the demons — your sons, by whom do they cast forth? because of this your judges they shall be;
Read in context
- 17ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
- 18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
- 19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
- 20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
- 21ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
Cross references
- Luke 9:49 ಲೂಕನು 9:49ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
- Job 15:6 ಯೋಬನು 15:6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Matthew 12:27–28 ಮತ್ತಾಯನು 12:27–28ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು. ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Luke 11:31–32 ಲೂಕನು 11:31–32ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ. ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.