Luke · chapter 11 · verse 2
Luke 11:2 in Kannada
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
Aatanu avarige--neevu praarthane maaduvaaga--paralokadalliruva namma tande ye, ninna naamavu parishuddhavaagali, ninna raajyavu barali, ninna chittavu paralokadalli neraveruvante bhoomiyalliyoo neraverali.
Luke 11:2 in English
- King James Version (KJV)
- And he said unto them, When ye pray, say, Our Father which art in heaven, Hallowed be thy name. Thy kingdom come. Thy will be done, as in heaven, so in earth.
- World English Bible (WEB)
- He said to them, “When you pray, say, ‘Our Father in heaven, may your name be kept holy. May your Kingdom come. May your will be done on earth, as it is in heaven.
- American Standard Version (ASV)
- And he said unto them, When ye pray, say, Father, Hallowed be thy name. Thy kingdom come.
- Bible in Basic English (BBE)
- And he said to them, When you say your prayers, say, Father, may your name be kept holy and your kingdom come.
- Darby Translation (DBY)
- And he said to them, When ye pray, say, Father, thy name be hallowed; thy kingdom come;
- Webster's Bible (WBS)
- And he said to them, When ye pray, say, Our Father who art in heaven, Hallowed be thy name. Thy kingdom come. Thy will be done, as in heaven, so on earth.
- Young's Literal Translation (YLT)
- And he said to them, 'When ye may pray, say ye: Our Father who art in the heavens; hallowed be Thy name: Thy reign come; Thy will come to pass, as in heaven also on earth;
Read in context
- 1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
- 2ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
- 3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
- 4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
Cross references
- Matthew 6:6–15 ಮತ್ತಾಯನು 6:6–15ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ. ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ. ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ. ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು. ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್. ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Psalm 72:18–19 ಕೀರ್ತನೆಗಳು 72:18–19ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 1 Thessalonians 3:11–13 1 ಥೆಸಲೊನೀಕದವರಿಗೆ 3:11–13ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ. ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 2 Chronicles 20:6 2 ಪೂರ್ವಕಾಲವೃತ್ತಾಂತ 20:6ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- 2 Corinthians 1:2 2 ಕೊರಿಂಥದವರಿಗೆ 1:2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Philippians 4:20 ಫಿಲಿಪ್ಪಿಯವರಿಗೆ 4:20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
- Philippians 1:2 ಫಿಲಿಪ್ಪಿಯವರಿಗೆ 1:2ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 1 Corinthians 1:3 1 ಕೊರಿಂಥದವರಿಗೆ 1:3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.