Luke · chapter 11 · verse 25
Luke 11:25 in Kannada
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
Adu bandu aa maneyu gudisi alankarisiddannu kanditu.
Luke 11:25 in English
- King James Version (KJV)
- And when he cometh, he findeth [it] swept and garnished.
- World English Bible (WEB)
- When he returns, he finds it swept and put in order.
- American Standard Version (ASV)
- And when he is come, he findeth it swept and garnished.
- Bible in Basic English (BBE)
- And when he comes, he sees that it has been made fair and clean.
- Darby Translation (DBY)
- And having come, he finds it swept and adorned.
- Webster's Bible (WBS)
- And when he cometh, he findeth [it] swept and garnished.
- Young's Literal Translation (YLT)
- and having come, it findeth [it] swept and adorned;
Read in context
- 23ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
- 24ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
- 25ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
- 26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
- 27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
Cross references
- Jude 1:8–13 ಯೂದನು 1:8–13ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- 2 Peter 2:10–19 2 ಪೇತ್ರನು 2:10–19ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ. ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ. ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- 2 Thessalonians 2:9–12 2 ಥೆಸಲೊನೀಕದವರಿಗೆ 2:9–12ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Psalm 81:11–12 ಕೀರ್ತನೆಗಳು 81:11–12ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Matthew 12:44–45 ಮತ್ತಾಯನು 12:44–45ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- 2 Chronicles 24:17–22 2 ಪೂರ್ವಕಾಲವೃತ್ತಾಂತ 24:17–22ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು. ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು. ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು. ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.