Luke · chapter 11 · verse 35
Luke 11:35 in Kannada
ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
Aadadarinda ninnalliruva belaku kattaleyaagadante nodiko;
Luke 11:35 in English
- King James Version (KJV)
- Take heed therefore that the light which is in thee be not darkness.
- World English Bible (WEB)
- Therefore see whether the light that is in you isn’t darkness.
- American Standard Version (ASV)
- Look therefore whether the light that is in thee be not darkness.
- Bible in Basic English (BBE)
- So take care that the light which is in you is not dark.
- Darby Translation (DBY)
- See therefore that the light which is in thee be not darkness.
- Webster's Bible (WBS)
- Take heed therefore, that the light which is in thee be not darkness.
- Young's Literal Translation (YLT)
- take heed, then, lest the light that [is] in thee be darkness;
Read in context
- 33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
- 34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
- 35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
- 36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
- 37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
Cross references
- Proverbs 16:25 ಜ್ಞಾನೋಕ್ತಿಗಳು 16:25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- 2 Peter 1:9 2 ಪೇತ್ರನು 1:9ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- James 3:13–17 ಯಾಕೋಬನು 3:13–17ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Corinthians 1:19–21 1 ಕೊರಿಂಥದವರಿಗೆ 1:19–21ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- Revelation 3:17 ಪ್ರಕಟನೆ 3:17ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- 1 Corinthians 3:18–20 1 ಕೊರಿಂಥದವರಿಗೆ 3:18–20ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- Romans 1:22 ರೋಮಾಪುರದವರಿಗೆ 1:22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- Isaiah 5:20–21 ಯೆಶಾಯ 5:20–21ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ! ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Romans 2:19–23 ರೋಮಾಪುರದವರಿಗೆ 2:19–23ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- John 9:39–41 ಯೋಹಾನನು 9:39–41ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು. ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.