Luke · chapter 11 · verse 36
Luke 11:36 in Kannada
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
Aadakaarana yaava bhaagadalliyoo kattaleyaagi rade ninna shareeravellavoo poornavaagi belakaagiruva daadare prakaashamaanavaada deepavu ninage belaku koduva prakaara samastavoo belakaagiruvadu endu helidanu.
Luke 11:36 in English
- King James Version (KJV)
- If thy whole body therefore [be] full of light, having no part dark, the whole shall be full of light, as when the bright shining of a candle doth give thee light.
- World English Bible (WEB)
- If therefore your whole body is full of light, having no part dark, it will be wholly full of light, as when the lamp with its bright shining gives you light.”
- American Standard Version (ASV)
- If therefore thy whole body be full of light, having no part dark, it shall be wholly full of light, as when the lamp with its bright shining doth give thee light.
- Bible in Basic English (BBE)
- If, then, all your body is light, with no part of it dark, it will be completely full of light, as when a flame with its bright shining gives you light.
- Darby Translation (DBY)
- If therefore thy whole body [is] light, not having any part dark, it shall be all light as when the lamp lights thee with its brightness.
- Webster's Bible (WBS)
- If thy whole body therefore [be] full of light, having no part dark, the whole shall be full of light; as when the bright shining of a candle doth give thee light.
- Young's Literal Translation (YLT)
- if then thy whole body is lightened, not having any part darkened, the whole shall be lightened, as when the lamp by the brightness may give thee light.'
Read in context
- 34ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
- 35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
- 36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
- 37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
- 38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
Cross references
- Proverbs 20:27 ಜ್ಞಾನೋಕ್ತಿಗಳು 20:27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
- Proverbs 4:18–19 ಜ್ಞಾನೋಕ್ತಿಗಳು 4:18–19ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 119:97–105 ಕೀರ್ತನೆಗಳು 119:97–105ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ. ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ. ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ. ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ. ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ. ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Proverbs 2:1–11 ಜ್ಞಾನೋಕ್ತಿಗಳು 2:1–11ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ. ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Matthew 13:11–12 ಮತ್ತಾಯನು 13:11–12ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.