Luke · chapter 11 · verse 38
Luke 11:38 in Kannada
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
Aadare ootakke modalu aatanu kaitolakollade iruvadannu pharisaayanu kandu aashcharyapattanu.
Luke 11:38 in English
- King James Version (KJV)
- And when the Pharisee saw [it], he marvelled that he had not first washed before dinner.
- World English Bible (WEB)
- When the Pharisee saw it, he marveled that he had not first washed himself before dinner.
- American Standard Version (ASV)
- And when the Pharisee saw it, he marvelled that he had not first bathed himself before dinner.
- Bible in Basic English (BBE)
- And when the Pharisee saw it, he was surprised because he came to the meal without first washing himself.
- Darby Translation (DBY)
- But the Pharisee seeing [it] wondered that he had not first washed before dinner.
- Webster's Bible (WBS)
- And when the Pharisee saw [it] , he marveled that he had not first washed before dinner.
- Young's Literal Translation (YLT)
- and the Pharisee having seen, did wonder that he did not first baptize himself before the dinner.
Read in context
- 36ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
- 37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
- 38ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
- 39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- 40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
Cross references
- Matthew 15:2–3 ಮತ್ತಾಯನು 15:2–3ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- John 3:25 ಯೋಹಾನನು 3:25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
- Mark 7:2–5 ಮಾರ್ಕನು 7:2–5ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು. ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.