Luke · chapter 11 · verse 41
Luke 11:41 in Kannada
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
Aadare nimage iruvavugalalli neevu daanaakodiri; aaga igo, nimage ellavu galu shuddhavaagiruvavu.
Luke 11:41 in English
- King James Version (KJV)
- But rather give alms of such things as ye have; and, behold, all things are clean unto you.
- World English Bible (WEB)
- But give for gifts to the needy those things which are within, and behold, all things will be clean to you.
- American Standard Version (ASV)
- But give for alms those things which are within; and behold, all things are clean unto you.
- Bible in Basic English (BBE)
- But if you give to the poor such things as you are able, then all things are clean to you.
- Darby Translation (DBY)
- But rather give alms of what ye have, and behold, all things are clean to you.
- Webster's Bible (WBS)
- But rather give alms of such things as ye have; and behold, all things are clean to you.
- Young's Literal Translation (YLT)
- But what ye have give ye [as] alms, and, lo, all things are clean to you.
Read in context
- 39ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
- 40ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
- 41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- 42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- 43ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
Cross references
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- Acts 10:15 ಅಪೊಸ್ತಲರ ಕೃತ್ಯಗಳು 10:15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- 2 Corinthians 8:7–9 2 ಕೊರಿಂಥದವರಿಗೆ 8:7–9ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Isaiah 58:7–11 ಯೆಶಾಯ 58:7–11ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- Matthew 6:1–4 ಮತ್ತಾಯನು 6:1–4ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು. ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ. ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.