Luke · chapter 12 · verse 11
Luke 12:11 in Kannada
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
Avaru nimmannu sabhaa mandiragaligoo nyaayaadhipatigala mundeyoo adhikaarigala mundeyoo tandaaga hege illave yaavadannu uttarakodabekendu illave enu helabekendu yochisabediri.
Luke 12:11 in English
- King James Version (KJV)
- And when they bring you unto the synagogues, and [unto] magistrates, and powers, take ye no thought how or what thing ye shall answer, or what ye shall say:
- World English Bible (WEB)
- When they bring you before the synagogues, the rulers, and the authorities, don’t be anxious how or what you will answer or what you will say;
- American Standard Version (ASV)
- And when they bring you before the synagogues, and the rulers, and the authorities, be not anxious how or what ye shall answer, or what ye shall say:
- Bible in Basic English (BBE)
- And when they take you before the Synagogues and the authorities and the rulers, take no thought about what answers you will give, or what you will say:
- Darby Translation (DBY)
- But when they bring you before the synagogues and rulers and the authorities, be not careful how or what ye shall answer, or what ye shall say;
- Webster's Bible (WBS)
- And when they bring you to the synagogues, and [before] magistrates, and powers, be not solicitous how or what thing ye shall answer, or what ye shall say:
- Young's Literal Translation (YLT)
- 'And when they bring you before the synagogues, and the rulers, and the authorities, be not anxious how or what ye may reply, or what ye may say,
Read in context
- 9ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
- 10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
- 11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
- 12ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- 13ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
Cross references
- Matthew 10:17–20 ಮತ್ತಾಯನು 10:17–20ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Acts 4:5–7 ಅಪೊಸ್ತಲರ ಕೃತ್ಯಗಳು 4:5–7ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
- Luke 21:12–14 ಲೂಕನು 21:12–14ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
- Luke 12:22 ಲೂಕನು 12:22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Matthew 23:34 ಮತ್ತಾಯನು 23:34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
- Mark 13:9–11 ಮಾರ್ಕನು 13:9–11ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ. ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ. ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
- Acts 6:9–15 ಅಪೊಸ್ತಲರ ಕೃತ್ಯಗಳು 6:9–15ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು. ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು. ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು. ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Acts 5:27–32 ಅಪೊಸ್ತಲರ ಕೃತ್ಯಗಳು 5:27–32ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು-- ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು. ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.