Luke · chapter 12 · verse 24
Luke 12:24 in Kannada
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
Kaagegalannu gamanisiri; avu bittuvadilla, koyyuvadilla; avugalige ugraanavaagalee kanajavaagalee illa; aadaagyoo devaru avugalige aahaara koduttaane; neevu pakshigaliginta eshto hechchinavaraagiddeerallaa.
Luke 12:24 in English
- King James Version (KJV)
- Consider the ravens: for they neither sow nor reap; which neither have storehouse nor barn; and God feedeth them: how much more are ye better than the fowls?
- World English Bible (WEB)
- Consider the ravens: they don’t sow, they don’t reap, they have no warehouse or barn, and God feeds them. How much more valuable are you than birds!
- American Standard Version (ASV)
- Consider the ravens, that they sow not, neither reap; which have no store-chamber nor barn; and God feedeth them: of how much more value are ye than the birds!
- Bible in Basic English (BBE)
- Give thought to the ravens; they do not put seeds into the earth, or get together grain; they have no store-houses or buildings; and God gives them their food: of how much greater value are you than the birds!
- Darby Translation (DBY)
- Consider the ravens, that they sow not nor reap; which have neither storehouse nor granary; and God feeds them. How much better are ye than the birds?
- Webster's Bible (WBS)
- Consider the ravens: for they neither sow nor reap: which neither have store-house, nor barn; and God feedeth them: How much more are ye better than the fowls?
- Young's Literal Translation (YLT)
- 'Consider the ravens, that they sow not, nor reap, to which there is no barn nor storehouse, and God doth nourish them; how much better are ye than the fowls?
Read in context
- 22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- 23ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
- 24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- 25ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
- 26ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
Cross references
- Luke 12:7 ಲೂಕನು 12:7ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
- Matthew 10:31 ಮತ್ತಾಯನು 10:31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Job 38:41 ಯೋಬನು 38:41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Job 35:11 ಯೋಬನು 35:11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
- 1 Kings 17:1–6 1 ಅರಸುಗಳು 17:1–6ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು. ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- Luke 12:30–32 ಲೂಕನು 12:30–32ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು. ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.