Luke · chapter 12 · verse 27
Luke 12:27 in Kannada
ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
Hoovugalu hege beleyuttave yochisiri; avu kashtapadu vadilla, nooluvadilla; aadaagyoo solomo nanu tanna ellaa vaibhavadalli saha ivugalalli ondaranteyaadaroo dharisiralilla endu naanu nimage heluttene.
Luke 12:27 in English
- King James Version (KJV)
- Consider the lilies how they grow: they toil not, they spin not; and yet I say unto you, that Solomon in all his glory was not arrayed like one of these.
- World English Bible (WEB)
- Consider the lilies, how they grow. They don’t toil, neither do they spin; yet I tell you, even Solomon in all his glory was not arrayed like one of these.
- American Standard Version (ASV)
- Consider the lilies, how they grow: they toil not, neither do they spin; yet I say unto you, Even Solomon in all his glory was not arrayed like one of these.
- Bible in Basic English (BBE)
- Give thought to the flowers: they do no work, they make no thread; and still I say to you, Even Solomon, in all his glory, was not clothed like one of these.
- Darby Translation (DBY)
- Consider the lilies how they grow: they neither toil nor spin; but I say unto you, Not even Solomon in all his glory was clothed as one of these.
- Webster's Bible (WBS)
- Consider the lilies how they grow: They toil not, they spin not; and yet I say to you, that Solomon in all his glory was not arrayed like one of these.
- Young's Literal Translation (YLT)
- 'Consider the lilies, how do they grow? they labour not, nor do they spin, and I say to you, not even Solomon in all his glory was arrayed as one of these;
Read in context
- 25ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
- 26ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
- 27ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
- 28ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
- 29ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
Cross references
- Matthew 6:28–30 ಮತ್ತಾಯನು 6:28–30ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
- Luke 12:24 ಲೂಕನು 12:24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- 1 Kings 10:1–13 1 ಅರಸುಗಳು 10:1–13ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ. ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ-- ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು. ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು. ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು. ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ. ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು. ಅರಸನು ಅಲ್ಮುಗ್ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ. ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.
- 2 Chronicles 9:1–12 2 ಪೂರ್ವಕಾಲವೃತ್ತಾಂತ 9:1–12ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು. ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ. ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು. ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ. ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು. ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು. ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು. ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ. ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು. ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ. ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.