Luke · chapter 12 · verse 36
Luke 12:36 in Kannada
ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
Neevantoo tamma odeyanu maduveyinda yaavaaga hindiruguvano endu kaayuva mattu avanu bandu tattidaaga takshanave avanige tereyuva manushyarante irri.
Luke 12:36 in English
- King James Version (KJV)
- And ye yourselves like unto men that wait for their lord, when he will return from the wedding; that when he cometh and knocketh, they may open unto him immediately.
- World English Bible (WEB)
- Be like men watching for their lord when he returns from the wedding feast, that when he comes and knocks, they may immediately open to him.
- American Standard Version (ASV)
- and be ye yourselves like unto men looking for their lord, when he shall return from the marriage feast; that, when he cometh and knocketh, they may straightway open unto him.
- Bible in Basic English (BBE)
- And be like men who are looking for their lord, when he comes back from the bride-feast; so that when he comes to the door, it will be open to him quickly.
- Darby Translation (DBY)
- and ye like men who wait their own lord whenever he may leave the wedding, that when he comes and knocks, they may open to him immediately.
- Webster's Bible (WBS)
- And ye yourselves like men that wait for their lord, when he shall return from the wedding; that, when he cometh and knocketh, they may open to him immediately.
- Young's Literal Translation (YLT)
- and ye like to men waiting for their lord, when he shall return out of the wedding feasts, that he having come and knocked, immediately they may open to him.
Read in context
- 34ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.
- 35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- 36ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
- 37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- 38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
Cross references
- Jude 1:20–21 ಯೂದನು 1:20–21ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- James 5:7–8 ಯಾಕೋಬನು 5:7–8ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Isaiah 64:4 ಯೆಶಾಯ 64:4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
- Mark 13:34–37 ಮಾರ್ಕನು 13:34–37ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Matthew 25:1–13 ಮತ್ತಾಯನು 25:1–13ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Matthew 22:1–14 ಮತ್ತಾಯನು 22:1–14ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ-- ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು. ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- Song of Solomon 5:5–6 ಪರಮಗೀತೆ 5:5–6ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು. ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
- Matthew 24:42–44 ಮತ್ತಾಯನು 24:42–44ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Luke 2:25–30 ಲೂಕನು 2:25–30ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು. ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು. ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು. ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 2 Peter 1:13–15 2 ಪೇತ್ರನು 1:13–15ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.