Luke · chapter 12 · verse 37
Luke 12:37 in Kannada
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
Odeyanu bandaaga yaaru echcharavaagiruvadannu avanu kaanuvano aa sevakaru dhanyaru; naanu nimage nijavaagi heluttene, avanu bandu nadukattikondu avarannu ootakke koodrisi avarige taane upacharisuvanu.
Luke 12:37 in English
- King James Version (KJV)
- Blessed [are] those servants, whom the lord when he cometh shall find watching: verily I say unto you, that he shall gird himself, and make them to sit down to meat, and will come forth and serve them.
- World English Bible (WEB)
- Blessed are those servants whom the lord will find watching when he comes. Most certainly I tell you that he will dress himself, make them recline, and will come and serve them.
- American Standard Version (ASV)
- Blessed are those servants, whom the lord when he cometh shall find watching: verily I say unto you, that he shall gird himself, and make them sit down to meat, and shall come and serve them.
- Bible in Basic English (BBE)
- Happy are those servants who are watching when the lord comes; truly I say to you, he will make himself their servant and, placing them at the table, he will come out and give them food.
- Darby Translation (DBY)
- Blessed are those bondmen whom the lord [on] coming shall find watching; verily I say unto you, that he will gird himself and make them recline at table, and coming up will serve them.
- Webster's Bible (WBS)
- Blessed [are] those servants, whom the lord when he cometh shall find watching: verily I say to you, that he will gird himself, and make them to sit down to eat, and will come forth and serve them.
- Young's Literal Translation (YLT)
- 'Happy those servants, whom the lord, having come, shall find watching; verily I say to you, that he will gird himself, and will cause them to recline (at meat), and having come near, will minister to them;
Read in context
- 35ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
- 36ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
- 37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- 38ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
- 39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
Cross references
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Matthew 24:42 ಮತ್ತಾಯನು 24:42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
- John 13:4–5 ಯೋಹಾನನು 13:4–5ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು. ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- Matthew 24:45–47 ಮತ್ತಾಯನು 24:45–47ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 2 Peter 1:11 2 ಪೇತ್ರನು 1:11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
- Luke 12:43 ಲೂಕನು 12:43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- 1 Peter 5:1–4 1 ಪೇತ್ರನು 5:1–4ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ, ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.