Luke · chapter 12 · verse 42
Luke 12:42 in Kannada
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
Kartanu--haagaadare takkakaaladalli avara paalina aahaaravannu koduvadakkaagi odeyanu tanna maneyamele nemisuva nambigastanoo vivekiyoo aagiruva manevaarteyavanu yaaru?
Luke 12:42 in English
- King James Version (KJV)
- And the Lord said, Who then is that faithful and wise steward, whom [his] lord shall make ruler over his household, to give [them their] portion of meat in due season?
- World English Bible (WEB)
- The Lord said, “Who then is the faithful and wise steward, whom his lord will set over his household, to give them their portion of food at the right times?
- American Standard Version (ASV)
- And the Lord said, Who then is the faithful and wise steward, whom his lord shall set over his household, to give them their portion of food in due season?
- Bible in Basic English (BBE)
- And the Lord said, Who then is the wise and responsible servant whom his lord will put in control of his family, to give them their food at the right time?
- Darby Translation (DBY)
- And the Lord said, Who then is the faithful and prudent steward, whom his lord will set over his household, to give the measure of corn in season?
- Webster's Bible (WBS)
- And the Lord said, Who then is that faithful and wise steward, whom [his] lord shall make ruler over his household, to give [them their] portion of provisions in due season?
- Young's Literal Translation (YLT)
- And the Lord said, 'Who, then, is the faithful and prudent steward whom the lord shall set over his household, to give in season the wheat measure?
Read in context
- 40ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
- 41ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
- 42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- 43ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
- 44ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Cross references
- Matthew 24:45–46 ಮತ್ತಾಯನು 24:45–46ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
- 1 Peter 5:1–4 1 ಪೇತ್ರನು 5:1–4ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ, ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 1 Corinthians 4:1–2 1 ಕೊರಿಂಥದವರಿಗೆ 4:1–2ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- Luke 19:15–19 ಲೂಕನು 19:15–19ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು. ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು. ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು. ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು. ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Hebrews 3:5 ಇಬ್ರಿಯರಿಗೆ 3:5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.