Luke · chapter 12 · verse 52
Luke 12:52 in Kannada
ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
Indininda ondu maneyalli aidumandi bhedavaagi ibbarige virodhavaagi moovaru moovarige virodhavaagi ibbaru iruvaru.
Luke 12:52 in English
- King James Version (KJV)
- For from henceforth there shall be five in one house divided, three against two, and two against three.
- World English Bible (WEB)
- For from now on, there will be five in one house divided, three against two, and two against three.
- American Standard Version (ASV)
- for there shall be from henceforth five in one house divided, three against two, and two against three.
- Bible in Basic English (BBE)
- For from this time, a family of five in one house will be on opposite sides, three against two and two against three.
- Darby Translation (DBY)
- for from henceforth there shall be five in one house divided; three shall be divided against two, and two against three:
- Webster's Bible (WBS)
- For from henceforth there will be five in one house divided, three against two, and two against three.
- Young's Literal Translation (YLT)
- for there shall be henceforth five in one house divided — three against two, and two against three;
Read in context
- 50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
- 51ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
- 52ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
- 53ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
- 54ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
Cross references
- Acts 14:1–4 ಅಪೊಸ್ತಲರ ಕೃತ್ಯಗಳು 14:1–4ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು. ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು. ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- John 15:18–21 ಯೋಹಾನನು 15:18–21ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ. ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ. ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು. ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Micah 7:5–6 ಮೀಕ 7:5–6ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- John 10:19–21 ಯೋಹಾನನು 10:19–21ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು. ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು. ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Acts 28:24 ಅಪೊಸ್ತಲರ ಕೃತ್ಯಗಳು 28:24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- Acts 13:43–46 ಅಪೊಸ್ತಲರ ಕೃತ್ಯಗಳು 13:43–46ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- John 7:41–43 ಯೋಹಾನನು 7:41–43ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು. ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;