Luke · chapter 13 · verse 19
Luke 13:19 in Kannada
ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
Adu obba manushyanu saasivekaalannu tegedukondu hogi tanna tota dalli haakiddakke holikeyaagide; adu beledu ondu dodda maravaayitu; aakaashada pakshigalu adara kombegalalli vaasamaadidavu andanu.
Luke 13:19 in English
- King James Version (KJV)
- It is like a grain of mustard seed, which a man took, and cast into his garden; and it grew, and waxed a great tree; and the fowls of the air lodged in the branches of it.
- World English Bible (WEB)
- It is like a grain of mustard seed which a man took and put in his own garden. It grew and became a large tree, and the birds of the sky live in its branches.”
- American Standard Version (ASV)
- It is like unto a grain of mustard seed, which a man took, and cast into his own garden; and it grew, and became a tree; and the birds of the heaven lodged in the branches thereof.
- Bible in Basic English (BBE)
- It is like a grain of mustard seed which a man took and put in his garden, and it became a tree, and the birds of heaven made their resting-places in its branches.
- Darby Translation (DBY)
- It is like a grain of mustard [seed] which a man took and cast into his garden; and it grew and became a great tree, and the birds of heaven lodged in its branches.
- Webster's Bible (WBS)
- It is like a grain of mustard-seed, which a man took, and cast into his garden, and it grew, and became a great tree; and the fowls of the air lodged in the branches of it.
- Young's Literal Translation (YLT)
- It is like to a grain of mustard, which a man having taken, did cast into his garden, and it increased, and came to a great tree, and the fowls of the heavens did rest in its branches.'
Read in context
- 17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
- 18ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
- 19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
- 20ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
- 21ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
Cross references
- Daniel 4:12 ದಾನಿಯೇಲನು 4:12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Daniel 4:21 ದಾನಿಯೇಲನು 4:21ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Matthew 13:31–32 ಮತ್ತಾಯನು 13:31–32ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Mark 4:31–32 ಮಾರ್ಕನು 4:31–32ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ. ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
- Ezekiel 31:6 ಯೆಹೆಜ್ಕೇಲನು 31:6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
- Acts 4:4 ಅಪೊಸ್ತಲರ ಕೃತ್ಯಗಳು 4:4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.