Luke · chapter 13 · verse 9
Luke 13:9 in Kannada
ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
Idu phala phalisidare sari; illavaadare neenu idannu kadiduhaakabahudu andanu.
Luke 13:9 in English
- King James Version (KJV)
- And if it bear fruit, [well]: and if not, [then] after that thou shalt cut it down.
- World English Bible (WEB)
- If it bears fruit, fine; but if not, after that, you can cut it down.’”
- American Standard Version (ASV)
- and if it bear fruit thenceforth, [well]; but if not, thou shalt cut it down.
- Bible in Basic English (BBE)
- And if, after that, it has fruit, it is well; if not, let it be cut down.
- Darby Translation (DBY)
- and if it shall bear fruit — but if not, after that thou shalt cut it down.
- Webster's Bible (WBS)
- And if it shall bear fruit, [well] : and if not, [then] after that thou shalt cut it down.
- Young's Literal Translation (YLT)
- and if indeed it may bear fruit — ;and if not so, thereafter thou shalt cut it off.'
Read in context
- 7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
- 8ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
- 9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- 10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
- 11ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
Cross references
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Ezra 9:14–15 ಎಜ್ರನು 9:14–15ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ. ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Psalm 69:22–28 ಕೀರ್ತನೆಗಳು 69:22–28ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Daniel 9:5–8 ದಾನಿಯೇಲನು 9:5–8ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ. ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Revelation 16:5–7 ಪ್ರಕಟನೆ 16:5–7ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.