Luke · chapter 14 · verse 15
Luke 14:15 in Kannada
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
Aaga aatana sangada ootakke kootavaralli obbanu ee sangatigalannu keli aatanige--devara raajyadalli ootamaaduvavanu dhanyanu endu helidanu.
Luke 14:15 in English
- King James Version (KJV)
- And when one of them that sat at meat with him heard these things, he said unto him, Blessed [is] he that shall eat bread in the kingdom of God.
- World English Bible (WEB)
- When one of those who sat at the table with him heard these things, he said to him, “Blessed is he who will feast in God’s Kingdom!”
- American Standard Version (ASV)
- And when one of them that sat at meat with him heard these things, he said unto him, Blessed is he that shall eat bread in the kingdom of God.
- Bible in Basic English (BBE)
- And, hearing these words, one of those who were at table with him said to him, Happy is the man who will be a guest in the kingdom of God.
- Darby Translation (DBY)
- And one of those that were lying at table with [them], hearing these things, said to him, Blessed [is] he who shall eat bread in the kingdom of God.
- Webster's Bible (WBS)
- And when one of them that sat at table with him heard these things, he said to him, Blessed [is] he that shall eat bread in the kingdom of God.
- Young's Literal Translation (YLT)
- And one of those reclining with him, having heard these things, said to him, 'Happy [is] he who shall eat bread in the reign of God;'
Read in context
- 13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
- 14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- 15ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
- 16ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
- 17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
Cross references
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Luke 13:29 ಲೂಕನು 13:29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
- Matthew 25:10 ಮತ್ತಾಯನು 25:10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- John 6:27–59 ಯೋಹಾನನು 6:27–59ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು. ಆಗ ಅವರು ಆತನಿಗೆ--ನಾವು ದೇವರ ಕ್ರಿಯೆ ಗಳನ್ನು ಮಾಡುವಂತೆ ಏನು ಮಾಡಬೇಕು ಎಂದು ಕೇಳಿದ್ದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು. ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ? ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು. ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ. ಪರಲೋಕದಿಂದ ಕೆಳಗೆ ಬಂದು ಲೋಕಕ್ಕೆ ಜೀವವನ್ನು ಕೊಡುವಾತನೇ ದೇವರ ರೊಟ್ಟಿಯಾಗಿದ್ದಾನೆ ಅಂದನು. ಅದಕ್ಕವರು ಆತನಿಗೆ--ಕರ್ತನೇ, ಈ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ. ಆದರೆ--ನೀವು ನನ್ನನ್ನು ನೋಡಿಯೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳಿದೆನು. ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ. ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು. ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ ಎಂದು ಆತನು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗುಣುಗುಟ್ಟಿ-- ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು. ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಿಮ್ಮ ನಿಮ್ಮೊಳಗೆ ಗುಣುಗುಟ್ಟ ಬೇಡಿರಿ. ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ. ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನ ಮೇಲೆ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ನಾನೇ ಆ ಜೀವದ ರೊಟ್ಟಿಯಾಗಿದ್ದೇನೆ. ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದಾಗ್ಯೂ ಸತ್ತು ಹೋದರು. ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು. ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
- Matthew 8:11 ಮತ್ತಾಯನು 8:11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
Original words (Greek)
- And · G1161δέ dé
- one · G5100τὶς tìs
- that · G3588ὁ ho
- him · G4873συνανάκειμαι synanákeimai
- heard · G191ἀκούω akoúō
- things · G5023ταῦτα taûta
- said · G2036ἔπω épō
- him · G846αὐτός autós
- Blessed · G3107μακάριος makários
- that · G3739ὅς hós
- eat · G5315φάγω phágō
- bread · G740ἄρτος ártos
- in · G1722ἐν en
- kingdom · G932βασιλεία basileía
- God · G2316θεός theós