Luke · chapter 14 · verse 26
Luke 14:26 in Kannada
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
Yaavanaadaroo nanna balige bandu tanna tande yannaagalee taayiyannaagalee hendatiyannaagalee makkalannaagalee sahodararannaagalee sahodari yarannaagalee haudu, tanna svanta praanavannu saha hagemaadadiddare avanu nanna shishyanaagira laaranu.
Luke 14:26 in English
- King James Version (KJV)
- If any [man] come to me, and hate not his father, and mother, and wife, and children, and brethren, and sisters, yea, and his own life also, he cannot be my disciple.
- World English Bible (WEB)
- “If anyone comes to me, and doesn’t disregard his own father, mother, wife, children, brothers, and sisters, yes, and his own life also, he can’t be my disciple.
- American Standard Version (ASV)
- If any man cometh unto me, and hateth not his own father, and mother, and wife, and children, and brethren, and sisters, yea, and his own life also, he cannot be my disciple.
- Bible in Basic English (BBE)
- And turning round, he said to them, If any man comes to me, and has not hate for his father and mother and wife and children and brothers and sisters, and even for his life, he may not be my disciple.
- Darby Translation (DBY)
- If any man come to me, and shall not hate his own father and mother, and wife, and children, and brothers, and sisters, yea, and his own life too, he cannot be my disciple;
- Webster's Bible (WBS)
- If any [man] cometh to me, and hateth not his father, and mother, and wife, and children, and brethren, and sisters, yes, and his own life also, he cannot be my disciple.
- Young's Literal Translation (YLT)
- 'If any one doth come unto me, and doth not hate his own father, and mother, and wife, and children, and brothers, and sisters, and yet even his own life, he is not able to be my disciple;
Read in context
- 24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
- 26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- 27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- 28ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
Cross references
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- John 12:25 ಯೋಹಾನನು 12:25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Psalm 73:25–26 ಕೀರ್ತನೆಗಳು 73:25–26ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Deuteronomy 13:6–8 ಧರ್ಮೋಪದೇಶಕಾಂಡ 13:6–8ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- Ecclesiastes 2:17–19 ಪ್ರಸಂಗಿ 2:17–19ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.